ನವದೆಹಲಿ: ಸಂವಿಧಾನ ದಿನದ ಅಂಗವಾಗಿ ರಾಷ್ಟ್ರಪತಿ ಭವನ ಮತ್ತು ಸಂಸತ್ತು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದೆ. 2015 ರಿಂದ ಪ್ರತಿ ವರ್ಷ ನವೆಂಬರ್ 26 ರಂದು ದೇಶದಲ್ಲಿ ಸಂವಿಧಾನ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನ ಸಂವಿಧಾನವನ್ನು ಸ್ವೀಕಾರ ಮಾಡಿದ ದಿನವಾಗಿದೆ.
2015ರಲ್ಲಿ ಮೊದಲ ಬಾರಿಗೆ ಸಂವಿಧಾನ ದಿನವನ್ನು ಆಚರಣೆ ಮಾಡಲಾಯಿತು. ಸಂವಿಧಾನ ಶಿಲ್ಪಿ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರ ಗೌರವಾರ್ಥ ಈ ದಿನವನ್ನು ಆಚರಣೆ ಮಾಡಲಾಯಿತು. ಈ ದಿನದ ಆಚರಣೆಯ ಬಗ್ಗೆ 2015ರ ಅಕ್ಟೋಬರ್ 11 ರಂದು ಮುಂಬೈಯಲ್ಲಿ ಸಮಾನತೆಯ ಪ್ರತಿಮೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದರು.
ನವೆಂಬರ್ 26 ಅನ್ನು ಈ ಹಿಂದೆ ಕಾನೂನು ದಿನವನ್ನಾಗಿ ಆಚರಣೆ ಮಾಡಲಾಗುತ್ತಿತ್ತು. ಈ ದಿನ 1949 ರಲ್ಲಿ ಭಾರತವು ಸಂವಿಧಾನವನ್ನು ಸ್ವೀಕಾರ ಮಾಡಿತ್ತು. ಬಳಿಕ ಮೂರು ವರ್ಷ ಅಂದರೆ 1950ರ ಜನವರಿ 26ರಂದು ಸಂವಿಧಾನವನ್ನು ಅನುಷ್ಠಾನಗೊಳಿಸಲಾಯಿತು.
ಸಂವಿಧಾನದ ದಿನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, “ಈ ಸಂವಿಧಾನ ದಿವಸ ನಮ್ಮ ಸಂವಿಧಾನದ ಆದರ್ಶಗಳನ್ನು ಶಾಶ್ವತವಾಗಿಡಲಿ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಯೋಗದಾನ ನೀಡುವ ನಮ್ಮ ಬದ್ಧತೆಯನ್ನು ಬಲಪಡಿಸಲಿ ಎಂದು ನಾನು ಆಶಿಸುತ್ತೇನೆ. ಇದೇ ಕನಸನ್ನು ನಮ್ಮ ಸಂವಿಧಾನ ನಿರ್ಮಾತೃಗಳು ಕೂಡ ಕಂಡಿದ್ದರು” ಎಂದಿದ್ದಾರೆ.
ಸಂವಿಧಾನ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಂಟಿ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾತ್ರವಲ್ಲದೆ, ಬಿಜೆಪಿಯು ದೇಶವ್ಯಾಪಿಯಾಗಿ ಹತ್ತುದಿನಗಳ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.