ಚಂಡೀಗಢ: ಹರಿಯಾಣದ ಐತಿಹಾಸಿಕ ನಗರ ಕುರುಕ್ಷೇತ್ರದಲ್ಲಿ ಭವ್ಯ ಭಾರತ ಮಾತಾ ಮಂದಿರವನ್ನು ನಿರ್ಮಾಣ ಮಾಡುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಘೋಷಣೆ ಮಾಡಿದ್ದಾರೆ. ಈ ದೇಗುಲ ದೇಶದ ನಾಗರಿಕರಿಗೆ ಸಾಂಸ್ಕೃತಿಕ ಕೇಂದ್ರವಾಗಿದೆ ಮತ್ತು ಏಕತೆಯ ಕೇಂದ್ರವಾಗಲಿದೆ ಎಂದು ಅವರು ಹೇಳಿದ್ದಾರೆ.
ಅಂತರಾಷ್ಟ್ರೀಯ ಗೀತಾ ಮಹೋತ್ಸವದ ಸಂದರ್ಭದಲ್ಲಿ ಅವರು ಈ ಘೋಷಣೆಯನ್ನು ಮಾಡಿದ್ದು, 5 ಎಕರೆ ಭೂಪ್ರದೇಶದಲ್ಲಿ ದೇಗುಲ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
ಕುರುಕ್ಷೇತ್ರವನ್ನು ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರವಾಸೋದ್ಯಮದ ತಾಣವನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಈ ದೇಗುಲವನ್ನು ನಿರ್ಮಾಣ ಮಾಡುತ್ತಿರುವುದಾಗಿ ಖಟ್ಟರ್ ಹೇಳಿದ್ದು, ಯಾತ್ರಾರ್ಥಿಗಳಿಗೆ ಬೇಕಾದ ಎಲ್ಲ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದಾಗಿ ಅವರು ಹೇಳಿದ್ದಾರೆ.
ಕಳೆದ ವರ್ಷದ ಅಂತರರಾಷ್ಟ್ರೀಯ ಗೀತಾ ಮಹೋತ್ಸವದ ಸಂದರ್ಭದಲ್ಲಿ ಕುರುಕ್ಷೇತ್ರ ಭೇಟಿ ನೀಡಿದ್ದರು. ಕುರುಕ್ಷೇತ್ರದ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖಗೊಂಡಿದೆ ಎಂದಿರುವ ಖಟ್ಟರ್, ಇದರಿಂದಾಗಿ ಮುಂಬರುವ ವರ್ಷಗಳಲ್ಲಿ ಕುರುಕ್ಷೇತ್ರ ಆಗಮಿಸುವ ಪ್ರವಾಸಿಗರ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.