ಲಕ್ನೋ: ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರಕಾರವು ನಾಯಕ ಮಹೇಂದ್ರ ಪ್ರತಾಪ್ ಸಿಂಗ್ ಅವರ ಹೆಸರಲ್ಲಿ ಅಲಿಗಢದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಿದೆ.
ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ಅವರು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡುವ ಸಲುವಾಗಿ ಭೂಮಿಯನ್ನು ನೀಡಿದ್ದರು. ಹೀಗಾಗಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡುವಂತೆ ಬಿಜೆಪಿ ಬೇಡಿಕೆಯನ್ನು ಇಟ್ಟಿತ್ತು.
ಇದೀಗ ಯೋಗಿ ಆದಿತ್ಯನಾಥ ಸರಕಾರವು ಮಹೇಂದ್ರ ಪ್ರತಾಪ್ ಸಿಂಗ್ ಅವರ ಹೆಸರಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲು ನಿರ್ಧರಿಸಿದೆ. ಈ ಮೂಲಕ ಎಲ್ಲಾ ರಾಜಕೀಯ ವಿವಾದಕ್ಕೆ ತೆರೆ ಎಳೆದಿದೆ.
ಯೋಗಿ ಸರಕಾರವು ಈ ಬಗೆಗಿನ ಪ್ರಸ್ತಾವನೆಯನ್ನು ಸಂಪುಟದಲ್ಲಿ ಅಂಗೀಕರಿಸಿದೆ ಮತ್ತು ಈ ಬಗ್ಗೆ ಮಂಗಳವಾರ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.
ಉನ್ನತ ಶಿಕ್ಷಣ ಖಾತೆಯನ್ನು ಹೊಂದಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ದಿನೇಶ್ ಶರ್ಮ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸುಗ್ರೀವಾಜ್ಞೆ ಮಂಡನೆಯಾದ ಬಳಿಕ ವಿಶ್ವವಿದ್ಯಾಲಯದ ಕಾಮಗಾರಿಯನ್ನು ಸ್ಥಾಪನೆ ಮಾಡುತ್ತೇವೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.