ನವದೆಹಲಿ: ಅತ್ಯಂತ ಪವಿತ್ರ ಗ್ರಂಥವಾದ ಭಗವದ್ಗೀತೆಯನ್ನು ಹರಿಯಾಣದ ಶಾಲಾ ಪಠ್ಯಪುಸ್ತಕಗಳಲ್ಲಿ ಅಳವಡಿಸುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಘೋಷಿಸಿದ್ದಾರೆ.
ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸುವ ಉದ್ದೇಶವನ್ನು ಇಟ್ಟುಕೊಂಡು ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವುದಾಗಿ ಅವರು ಹೇಳಿದ್ದಾರೆ.
“ಭಗವದ್ಗೀತೆಯ ಶ್ಲೋಕಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕೆಂಬ ಅಭಿಪ್ರಾಯವನ್ನು ನಾವು ಹೊಂದಿದ್ದೇವೆ. ಈ ಹಿಂದೆಯೂ ನಾವಿದನ್ನು ಹೇಳಿದ್ದೆವು. ಮಕ್ಕಳು ಉತ್ತಮ ಮೌಲ್ಯಗಳನ್ನು ಕಲಿಯಬೇಕು ಎಂಬ ಉದ್ದೇಶದಿಂದ ಗೀತೆಯ ಶ್ಲೋಕಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸುತ್ತಿದ್ದೇವೆ” ಎಂದಿದ್ದಾರೆ.
ಭಗವದ್ಗೀತೆಯು ಜೀವನ ಪಾಠವನ್ನು ಒಳಗೊಂಡಿದೆ, ಅದು ಯಾವುದೇ ಧರ್ಮಕ್ಕೆ ಸಂಬಂಧಪಟ್ಟ ಗ್ರಂಥವಲ್ಲ ಎಂದಿದ್ದಾರೆ.
ಗೀತಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.