ನವದೆಹಲಿ: ಕಾರ್ಪೊರೇಟ್ ತೆರಿಗೆ ದರ ಕಡಿತದ ನಡುವೆಯೂ ನವೆಂಬರ್ ತಿಂಗಳ ನೇರ ತೆರಿಗೆ ಸಂಗ್ರಹ ಶೇಕಡಾ 5 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಹೇಳಿದ್ದಾರೆ.
ಲೋಕಸಭೆಯಲ್ಲಿ ತೆರಿಗೆ ಕಾನೂನು ತಿದ್ದುಪಡಿ ಮಸೂದೆ, 2019ರ ಆ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸದಸ್ಯೆ ಸುಪ್ರಿಯ ಸುಲೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ, ನವೆಂಬರ್ ತಿಂಗಳಲ್ಲಿ ನೀರು ತೆರಿಗೆ ಸಂಗ್ರಹವು ಶೇಕಡ 5 ರಷ್ಟು ಏರಿಕೆಯಾಗಿದೆ. ಈ ಮೂಲಕ ಕಾರ್ಪೊರೇಟ್ ತೆರಿಗೆ ದರ ಕಡಿತದಿಂದ ಉಂಟಾಗಿದ್ದ ಆತಂಕ ನಿವಾರಣೆಯಾಗಿದೆ ಎಂದಿದ್ದಾರೆ.
ಕಾರ್ಪೊರೇಟ್ ತೆರಿಗೆ ದರ ಕಡಿತದಿಂದ ಒಂದು ವೇಳೆ ನೇರ ತೆರಿಗೆ ಸಂಗ್ರಹ ಕುಸಿತ ಕಂಡರೆ ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಪ್ರಶ್ನಿಸಿದ್ದರು.
ಇದಕ್ಕೆ ಉತ್ತರಿಸಿದ ಸೀತಾರಾಮನ್, ನೇರ ತೆರಿಗೆ ಸಂಗ್ರಹದಲ್ಲಿ ಯಾವುದೇ ಕುಸಿತಗಳು ಕಂಡಿಲ್ಲ. ನಿಜ ಹೇಳಬೇಕೆಂದರೆ ನವೆಂಬರ್ ತಿಂಗಳಲ್ಲಿ ನೇರ ತೆರಿಗೆ ಸಂಗ್ರಹವು ಶೇಕಡಾ 5 ರಷ್ಟು ಏರಿಕೆಯನ್ನು ಕಂಡಿದೆ ಎಂದಿದ್ದಾರೆ.
ಅಲ್ಲದೆ ಗರಿಷ್ಠ ನೇರ ತೆರಿಗೆ ಸಂಗ್ರಹವು ಹಣಕಾಸು ವರ್ಷದ ಕಳೆದ ತ್ರೈಮಾಸಿಕದಲ್ಲಿ ನಡೆದಿದೆ ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ.
ಹೂಡಿಕೆಯನ್ನು ಉತ್ತೇಜಿಸುವ ಸಲುವಾಗಿ, ಪ್ರಗತಿಯನ್ನು ಹೆಚ್ಚಿಸುವ ಸಲುವಾಗಿ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಲುವಾಗಿ ಕೇಂದ್ರ ಸರಕಾರವು ಕಾರ್ಪೊರೇಟ್ ತೆರಿಗೆ ದರವು ಕಡಿತಗೊಳಿಸಿದ್ದು ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.