ನವದೆಹಲಿ: 3 ಏರ್ಕ್ರಾಫ್ಟ್ ಕ್ಯಾರಿಯರ್ ಗಳನ್ನು ಹೊಂದಬೇಕು ಎಂಬುದು ನೌಕಾಸೇನೆಯ ಬಹುದಿನಗಳ ಆಶಯವಾಗಿದೆ ಎಂದು ನೌಕಾ ಸೇನೆ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಹೇಳಿದ್ದಾರೆ. ಅಲ್ಲದೆ, 2022ರ ವೇಳೆಗೆ ಮೊದಲ ದೇಶಿಯ ಏರ್ಕ್ರಾಫ್ಟ್ ಕ್ಯಾರಿಯರ್ ಸಂಪೂರ್ಣವಾಗಿ ಕಾರ್ಯಾಚರಣೆಯನ್ನು ಆರಂಭಿಸಲಿದೆ ಎಂದಿದ್ದಾರೆ.
ವಾರ್ಷಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯಾವುದೇ ರೀತಿಯ ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಎದುರಿಸಲು ನೌಕಾಸೇನೆಯ ಸರ್ವ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.
3 ಏರ್ ಕ್ರಾಫ್ಟ್ ಕ್ಯಾರಿಯರ್ ಗಳನ್ನು ಹೊಂದುವುದು ನೌಕಾಸೇನೆಯ ಬಹುದಿನಗಳ ಯೋಜನೆಯಾಗಿದೆ ಎಂದು ಅವರು ಹೇಳಿದ್ದಾರೆ.
ಮೊದಲ ದೇಶಿಯ ಏರ್ಕ್ರಾಫ್ಟ್ (IAC)ಯು 2022ರ ವೇಳೆಗೆ ಸಂಪೂರ್ಣ ಕಾರ್ಯಾಚರಣೆಯನ್ನು ಆರಂಭಿಸಲಿದೆ ಮತ್ತು ಇದು ಮಿಗ್ 29 ಕೆ ಏರ್ಕ್ರಾಫ್ಟ್ ಅನ್ನು ಹೊಂದಲಿದೆ ಎಂದಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ನೌಕಾಸೇನೆಯ ವಾರ್ಷಿಕ ಬಜೆಟ್ ಹಂಚಿಕೆಯು ಶೇ.18ರಿಂದ ಶೇ.12ಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ.
ನೆರೆಹೊರೆ ಯಿಂದ ಸವಾಲುಗಳು ಎದುರಾದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಲ್ಲದೆ ಪ್ರಾದೇಶಿಕ ಸಮಾನಮನಸ್ಕ ರಾಷ್ಟ್ರಗಳೊಂದಿಗೆ ಕಾರ್ಯನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದಿದ್ದಾರೆ.
ಹಿಂದೂಮಹಾಸಾಗರ ಪ್ರದೇಶದಲ್ಲಿ ಚೀನಾದ ಏಳರಿಂದ ಎಂಟು ಹಡಗುಗಳು ಸಾಮಾನ್ಯವಾಗಿ ಪ್ರಸ್ತುತವಿರುತ್ತವೆ ಎಂದ ಅವರು, ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಭಾರತವು ಅತ್ಯಂತ ಸ್ಥಿರವಾದ ಪಾತ್ರವನ್ನು ವಹಿಸುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.