ಬೆಂಗಳೂರು: ಕರ್ನಾಟಕದ 15 ಅತ್ಯಂತ ಮಹತ್ವಪೂರ್ಣ ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆಬಿದ್ದಿದೆ.
ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಈಗಾಗಲೇ ಸಕ್ರಿಯವಾಗಿ ಪ್ರಚಾರವನ್ನು ನಡೆಸುವ ಮೂಲಕ ತಮ್ಮ ಗೆಲುವಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಈ ಉಪ ಚುನಾವಣೆಯಲ್ಲಿ ಹೊರಹೊಮ್ಮುವ ಫಲಿತಾಂಶ ಸರ್ಕಾರದ ಮೇಲೆ ಭಾರಿ ಪ್ರಮಾಣದಲ್ಲಿ ಪ್ರಭಾವ ಬೀರಲಿದೆ.
ಗುರುವಾರ ಬೆಳಗ್ಗೆ ಏಳರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಡಿಸೆಂಬರ್ 9ಕ್ಕೆ ಫಲಿತಾಂಶ ಹೊರಬೀಳಲಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚುನಾವಣಾ ಅಧಿಕಾರಿ,”15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಳೆದ ಹದಿಮೂರು ದಿನಗಳಿಂದ ನಡೆಯುತ್ತಿದ್ದ ಪ್ರಚಾರಕಾರ್ಯ ಶಾಂತಿಯುತವಾಗಿ ಮುಕ್ತಾಯವಾಗಿದೆ. ಕೆಲವೊಂದು ಸಣ್ಣಪುಟ್ಟ ವಾಗ್ವಾದಗಳನ್ನು ಹೊರತುಪಡಿಸಿದರೆ ಕಾನೂನು ಸುವ್ಯವಸ್ಥೆ ಹಾಳಾಗುವಂತಹ ಯಾವುದೇ ಸನ್ನಿವೇಶಗಳು ನಡೆದಿಲ್ಲ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಮ್ಮ ಅಧಿಕಾರಿಗಳು ಸೂಕ್ಷ್ಮ ಕಣ್ಗಾವಲನ್ನು ಇಟ್ಟಿದ್ದರು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.