ಬೆಂಗಳೂರು: ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಇಂದು ನಡೆಯುತ್ತಿದೆ. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ 17 ಶಾಸಕರ ರಾಜಿನಾಮೆಯಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಉಪ ಚುನಾವಣೆ ಬಗ್ಗೆ ಮಾಹಿತಿಯನ್ನು ನೀಡಿರುವ ಚುನಾವಣಾ ಅಧಿಕಾರಿಗಳು, “15 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. 6:00 ಗಂಟೆಯವರೆಗೆ ಮತದಾನ ಮುಂದುವರೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲೂ ಬಿಗಿಭದ್ರತೆಗಳನ್ನು ನಿಯೋಜನೆಗೊಳಿಸಲಾಗಿದೆ” ಎಂದಿದ್ದಾರೆ.
ಅಥಣಿ, ಕಾಗವಾಡ, ಗೋಕಾಕ್, ಎಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ,, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮಿಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ ಮತ್ತು ಹುಣಸೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ.
ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.
15 ಕ್ಷೇತ್ರಗಳಲ್ಲಿ ಸುಮಾರು 165 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಇವರಲ್ಲಿ 126 ಮಂದಿ ಸ್ವತಂತ್ರ ಅಭ್ಯರ್ಥಿಗಳು. 9 ಮಂದಿ ಮಹಿಳೆಯರು ಕಣದಲ್ಲಿದ್ದಾರೆ. 15 ಕ್ಷೇತ್ರಗಳಲ್ಲಿ ಒಟ್ಟು 38 ಲಕ್ಷ ಅರ್ಹ ಮತದಾರರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.