ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ಹಣಕಾಸು ನೀತಿ ಸಮಿತಿಯು ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಪಾಡಿದೆ. ಈ ಮೂಲಕ ರೆಪೋ ದರ ಶೇಕಡಾ 5.15ರಲ್ಲೇ ಇರಲಿದೆ.
ಬ್ಯಾಂಕುಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿ ದರವನ್ನು ರೆಪೋ ದರ ಎಂದು ಕರೆಯಲಾಗುತ್ತದೆ. ಪ್ರಸ್ತುತ ಸಂಕಷ್ಟದಲ್ಲಿರುವ ಆರ್ಥಿಕತೆಯನ್ನು ಸುಧಾರಿಸುವ ಸಲುವಾಗಿ ಆರ್ಬಿಐ ಬಡ್ಡಿ ದರವನ್ನು ಕಡಿಮೆ ಮಾಡುವ ನಿರೀಕ್ಷೆಯಿತ್ತು. ಆದರೆ ಯಥಾಸ್ಥಿತಿಯನ್ನು ಕಾಪಾಡುವ ಮೂಲಕ ಆರ್ಬಿಐ ಅಚ್ಚರಿ ಮೂಡಿಸಿದೆ.
ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಐದನೇ ದ್ವೈವಾರ್ಷಿಕ ನೀತಿಯಲ್ಲಿ ತಿಳಿಸಿದ್ದು, ಆರ್ಬಿಐ ಹಣಕಾಸು ನೀತಿಯ ಎಲ್ಲಾ ಸದಸ್ಯರುಗಳು ರೆಪೋ ದರವನ್ನು ಯಥಾ ಸ್ಥಿತಿಯನ್ನು ಕಾಪಾಡುವುದಕ್ಕೆ ಬೆಂಬಲವನ್ನು ನೀಡಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ದರ ಏರಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಎಂಬ ಅಭಿಪ್ರಾಯ ಎಲ್ಲರಿಂದ ವ್ಯಕ್ತವಾಗಿದೆ ಎಂದಿದೆ.
ಈ ಮೊದಲು ಸತತ ಐದು ಬಾರಿ ಆರ್ಬಿಐ ತನ್ನ ರೆಪೋ ದರವನ್ನು ಇಳಿಕೆ ಮಾಡಿತ್ತು. ಈ ಬಾರಿಯೂ ಆರ್ಥಿಕತೆಯನ್ನು ಸುಧಾರಿಸುವ ಸಲುವಾಗಿ ರೆಪೋ ದರವನ್ನು ಹಿಡಿಕೆ ಮಾಡಬಹುದು ಎಂಬ ನಿರೀಕ್ಷೆಯನ್ನು ಹೊಂದಲಾಗಿತ್ತು. ಆದರೆ ಅಚ್ಚರಿ ಎಂಬಂತೆ ಆರ್ಬಿಐ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಂಡಿದೆ.
ಆರ್ಬಿಐ ತನ್ನ ಅಧೀನಕ್ಕೆ ಒಳಪಡುವ ವಾಣಿಜ್ಯ ಬ್ಯಾಂಕುಗಳಿಗೆ ಒದಗಿಸುವ ಹಣಕಾಸಿಗೆ ವಿಧಿಸಲಾಗುವ ಬಡ್ಡಿ ದರವೇ ರೆಪೋ ದರ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.