ನವದೆಹಲಿ: 2022 ರಲ್ಲಿ ಜರುಗಲಿರುವ ಮೆಗಾ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿಯವರು ದೇಶದಾದ್ಯಂತದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ.
ಮೈಗೌವ್ ಇಂಡಿಯಾ ಮೂರನೇ ಸಂಚಿಕೆಯ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ಆಯೋಜನೆಗೊಳಿಸುತ್ತಿದೆ. ಇದರಲ್ಲಿ ಭಾಗಿಯಾಗುವಂತೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಆಹ್ವಾನಿಸಿದೆ. ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಂವಾದ ನಡೆಸುವ ಅವಕಾಶ ಲಭಿಸಲಿದೆ.
“2018 ಮತ್ತು 2019 ರಲ್ಲಿ ಪರೀಕ್ಷಾ ಪೆ ಚರ್ಚಾಗೆ ಸಿಕ್ಕ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ 2020ರಲ್ಲೂ ಪರೀಕ್ಷಾ ಪೆ ಚರ್ಚಾವನ್ನು ನಡೆಸಲು ಉದ್ದೇಶಿಸಲಾಗಿದೆ. ಇದು ಪರೀಕ್ಷೆ ಬರೆಯಲಿರುವ ಯುವ ವಿದ್ಯಾರ್ಥಿಗಳ ದುಗುಡ ದುಮ್ಮಾನಗಳನ್ನು ದೂರ ಮಾಡುವುದಲ್ಲದೆ, ಅವರಿಗೆ ಪ್ರಧಾನಿಯನ್ನು ಭೇಟಿಯಾಗುವ ಅವಕಾಶವನ್ನು ಕಲ್ಪಿಸಿಕೊಡುತ್ತದೆ” ಎಂದು ಮೈಗೌನಲ್ಲಿ ಹೇಳಲಾಗಿದೆ.
Exams are approaching and so is Pariksha Pe Charcha!
Let us keep working together to ensure stress free examinations.
Here is a unique contest for student of Classes 9 to 12. The winners will get to attend PPC 2020 early next year! https://t.co/8Ii60TzpBL
— Narendra Modi (@narendramodi) December 5, 2019
2020 ರಲ್ಲಿ 9 ರಿಂದ 12ನೇ ತರಗತಿ ಮಕ್ಕಳು ಪರೀಕ್ಷಾ ಪೇ ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ. ಅದಕ್ಕಾಗಿ ಅವರು 1500 ಶಬ್ದಗಳಲ್ಲಿ ಪ್ರಶ್ನೆಗೆ ಉತ್ತರವನ್ನು ತಿಳಿಸುವ ಅಗತ್ಯವಿದೆ. ಪ್ರಶ್ನೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದೆ. ಉತ್ತರವನ್ನು ಅಲ್ಲೇ ತಿಳಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪ್ರಧಾನಿ ಮೋದಿ ಅವರಿಗೂ 500 ಶಬ್ದಗಳೊಳಗೆ ಪ್ರಶ್ನೆಗಳನ್ನು ಕಳುಹಿಸಿ ಕೊಡಬಹುದಾಗಿದೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗಾಗಿ ಮಾಡಲಾಗಿದೆ, ಆದರೆ ಶಿಕ್ಷಕರು ಇದರಲ್ಲಿ ಭಾಗಿಯಾಗಬಹುದು. ಅವರಿಗೆ ಪ್ರತ್ಯೇಕ ಆಯ್ಕೆಗಳನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.