ಹೈದರಾಬಾದ್: ಹೈದರಾಬಾದ್ ಪಶುವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಶುಕ್ರವಾರ ಮುಂಜಾನೆ ಹೈದರಾಬಾದ್ ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ. ಈ ಬೆಳವಣಿಗೆಯನ್ನು ಸೈದರಾಬಾದ್ ಪೊಲೀಸರು ಖಚಿತಪಡಿಸಿದ್ದಾರೆ.
ಶುಕ್ರವಾರ ಬೆಳಗಿನ ಜಾವ 3.00 ಗಂಟೆಗೆ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು ಹತ್ಯೆ ಮಾಡಲಾಗಿದೆ. ತನಿಖೆಯ ಭಾಗವಾಗಿ ಪ್ರಕರಣದ ಮರು ಸೃಷ್ಟಿಯನ್ನು ಮಾಡುವ ಸಲುವಾಗಿ ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು, ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನವನ್ನು ನಡೆಸಿದ್ದಾರೆ. ಈ ವೇಳೆ ಪೊಲೀಸರು ಸ್ವರಕ್ಷಣೆಗಾಗಿ ಗುಂಡು ಹಾರಿಸಿ ನಾಲ್ವರನ್ನು ಹತ್ಯೆ ಮಾಡಿದ್ದಾರೆ.
ಶಂಶದಾಬಾದಿನ ಪೆಟ್ರೋಲ್ ಬಂಕ್ ಸಮೀಪ ಇಬ್ಬರು ಟ್ರಕ್ ಡ್ರೈವರ್ಗಳು ಮತ್ತು ಇಬ್ಬರು ಕ್ಲೀನರ್ಗಳು ಪಶುವೈದ್ಯೆ ಮೇಲೆ ನವೆಂಬರ್ 27 ರಂದು ರಾತ್ರಿ ಅತ್ಯಾಚಾರವನ್ನು ನಡೆಸಿದ್ದರು. ಬಳಿಕ ಆಕೆಯನ್ನು ಬೇರೊಂದು ಕಡೆಗೆ ಕರೆದೊಯ್ದು ಸುಟ್ಟು ಹಾಕಿದ್ದರು.
ಪಶುವೈದ್ಯೆ ಸ್ಕೂಟರ್ ಕೆಟ್ಟುಹೋದ ಸಮಯದಲ್ಲಿ ಈ ನಾಲ್ವರಲ್ಲಿ ಒಬ್ಬ ಸಹಾಯ ಮಾಡುವ ನೆಪದಲ್ಲಿ ಬಂದು ನಂತರ ಉಳಿದ ದುಷ್ಕರ್ಮಿಗಳು ಆಕೆಯ ಮೇಲೆ ಎರಗಿದ್ದಾರೆ.
ಘಟನೆಯ ಬಳಿಕ ಸೈದರಾಬಾದ್ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಈ ಘಟನೆ ದೇಶವ್ಯಾಪಿಯಾಗಿ ತಲ್ಲಣವನ್ನು ಸೃಷ್ಟಿ ಮಾಡಿತ್ತು. ಅತ್ಯಾಚಾರಿಗಳನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಇದೀಗ ಪೊಲೀಸರು ದುಷ್ಕರ್ಮಿಗಳನ್ನು ಹತ್ಯೆ ಮಾಡುವ ಮೂಲಕ ಮಹತ್ಕಾರ್ಯವನ್ನು ಮಾಡಿ ತೋರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.