ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಭ್ರಷ್ಟಾಚಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಡಿಸೆಂಬರ್ 13 ರೊಳಗೆ ಭ್ರಷ್ಟಾಚಾರ ಆರೋಪವನ್ನು ಹೊಂದಿರುವ ಅಧಿಕಾರಿಗಳ ಪಟ್ಟಿಯನ್ನು ನೀಡುವಂತೆ ಎಲ್ಲಾ ಸಚಿವಾಲಯಗಳಿಗೆ ಸೂಚನೆಯನ್ನು ನೀಡಲಾಗಿದೆ.
ಡಿಪಾರ್ಟ್ಮೆಂಟ್ ಆಫ್ ಪರ್ಸನಲ್ ಅಂಡ್ ಟ್ರೈನಿಂಗ್ 45 ಸಚಿವಾಲಯಗಳಿಗೆ ಮತ್ತು ಸರ್ಕಾರದ ಸಂಸ್ಥೆಗಳಿಗೆ ಸೂಚನೆಯನ್ನು ರವಾನಿಸಿದ್ದು, ಆದಷ್ಟು ಬೇಗ ಕೆಲಸ ನಿರ್ವಹಿಸದ ಮತ್ತು ಭ್ರಷ್ಟಾಚಾರ ಆರೋಪವನ್ನು ಹೊಂದಿರುವ ಅಧಿಕಾರಿಗಳ ವಿವರಗಳನ್ನು ರವಾನಿಸುವಂತೆ ಸೂಚಿಸಿದೆ. ಇಂತಹ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಯನ್ನು ನೀಡಲು ನಿರ್ಧರಿಸಲಾಗಿದೆ.
ಡಿಸೆಂಬರ್ 13ರ ಬಗ್ಗೆ ವಿವರಗಳನ್ನು ಸಲ್ಲಿಕೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ.
ಪರಿಣಾಮಕಾರಿತ್ವ ಮತ್ತು ಸಾರ್ವಭೌಮತೆಯ ಕೊರತೆಯನ್ನು ಹೊಂದಿರುವ ಸರ್ಕಾರಿ ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿಗೊಳಪಡಿಸುವ ಅಧಿಕಾರ ಸರ್ಕಾರಕ್ಕೆ ಇದೆ. ಅಧಿಕಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಸಮರ್ಪಕವಾದ ರೀತಿಯಲ್ಲಿ ಬಳಕೆ ಮಾಡುತ್ತಿದೆ.
ಈ ವರ್ಷದ ಜೀವನ ತಿಂಗಳಲ್ಲಿ ಸರಕಾರವು ಎಲ್ಲ ಸಚಿವಾಲಯಗಳಿಗೆ ಭ್ರಷ್ಟಾಚಾರ ಆರೋಪವನ್ನು ಹೊಂದಿರುವ ಮತ್ತು ಕಾರ್ಯನಿರ್ವಹಿಸದ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಹೇಳಿತ್ತು. ಇಂತಹ ಅಧಿಕಾರಿಗಳ ಪಟ್ಟಿಯನ್ನು ತಿಂಗಳು ತಿಂಗಳು ಪಡೆದು ಅವರಿಗೆ ಕಡ್ಡಾಯ ನಿವೃತ್ತಿಯನ್ನು ನೀಡುವುದಾಗಿ ಹೇಳಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.