
ಚೆನ್ನೈ: ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಹೆಡ್ ಕಾನ್ಸ್ಟೆಬಲ್ ಮರಣದಂಡನಾಕಾರನಾಗಿ ಸೇವೆ ಸಲ್ಲಿಸಲು ಇಚ್ಛೆ ವ್ಯಕ್ತಪಡಿಸಿ ತಿಹಾರ್ ಜೈಲಿನ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ರಾಮನಾಥಪುರಂನಲ್ಲಿನ ಇನ್ ಸರ್ವಿಸ್ ಟ್ರೈನಿಂಗ್ ಸೆಂಟರ್ನಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಎಸ್ ಸುಭಾಶ್ ಶ್ರೀನಿವಾಸನ್ ನಿರ್ಭಯಾ ಅತ್ಯಾಚಾರಿಗಳನ್ನು ನೇಣುಗಂಬಕ್ಕೆ ಏರಿಸುವ ಇಚ್ಛೆಯನ್ನು ವ್ಯಕ್ತಪಡಿಸಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ಮರಣದಂಡನೆಕಾರರ ಕೊರತೆಯಿದೆ ಎಂಬ ಬಗ್ಗೆ ಓದಿದ ನಂತರ, ಎಸ್. ಸುಭಾಶ್ ಶ್ರೀನಿವಾಸನ್ ಸ್ವಯಂಪ್ರೇರಿತರಾಗಿ ಈ ಕಾರ್ಯವನ್ನು ನಡೆಸಲು ಮುಂದೆ ಬಂದಿದ್ದಾರೆ.
ನನಗೆ ಯಾವುದೇ ವೇತನವನ್ನು ಪಾವತಿಸುವ ಅಗತ್ಯವಿಲ್ಲ ಎಂದು ಇವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. “ನೀವು ನೀಡುವ ಕೆಲಸವು ಪರಿಣಾಮಕಾರಿಯಾಗಿರುತ್ತದೆ. ಆದ್ದರಿಂದ, ಅಲ್ಲಿ ಕೆಲಸ ಮಾಡಲು ನನಗೆ ಅವಕಾಶ ಮಾಡಿಕೊಡಿ ಎಂದು ವಿನಮ್ರವಾಗಿ ಕೇಳುತ್ತೇನೆ” ಎಂದು ಅವರ ಪತ್ರದಲ್ಲಿ ತಿಳಿಸಿದ್ದಾರೆ.
ಸುಭಾಶ್ ಶ್ರೀನಿವಾಸನ್ ಸುದ್ದಿಯಲ್ಲಿರುವುದು ಇದೇ ಮೊದಲಲ್ಲ. ಜಾಹೀರಾತು ಏಜೆನ್ಸಿಗಳು ಮರಗಳಿಗೆ ಹಾಕಿದ್ದ ಮೂಳೆಗಳನ್ನು ಮರಗಳಿಂದ ತೆಗೆಯುವ ಕಾರ್ಯದಲ್ಲಿ ತೊಡಗಿಸಿಕೊಂಡು ಅವರು ಸುದ್ದಿ ಮಾಡಿದ್ದರು. ಅಗತ್ಯವಿರುವವರಿಗೆ ನೀರು ಪೂರೈಸುವುದು ಮತ್ತು ಅನಾಥ ಶವಗಳನ್ನು ದಹನ ಮಾಡುವ ಕಾರ್ಯಕ್ಕೆ ಅವರು ಪ್ರಸಿದ್ಧರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


