ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ತೀರಾ ಸಹಜವಾಗಿದೆ, ಇದುವರೆಗೆ ಒಂದೇ ಒಂದು ಗುಂಡು ಹಾರಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಇಂದು ಮಾತನಾಡಿದ ಅವರು, “ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ತೀರಾ ಸಹಜವಾಗಿದೆ. ಆದರೆ ಕಾಂಗ್ರೆಸ್ ಪಕ್ಷದ ಸ್ಥಿತಿ ಸಹಜವಾಗಿದೆ ಎಂದು ನಾನು ಹೇಳಲಾರೆ, ಯಾಕೆಂದರೆ ಅವರು 370ನೇ ವಿಧಿ ರದ್ದತಿ ಬಳಿಕ ಕಣಿವೆಯಲ್ಲಿ ರಕ್ತಪಾತವಾಗುತ್ತದೆ ಎಂದು ನಿರೀಕ್ಷೆ ಮಾಡಿದ್ದರು. ಅಂತಹ ಒಂದು ಚಿಕ್ಕ ಘಟನೆಯೂ ನಡೆದಿಲ್ಲ, ಒಂದೇ ಒಂದು ಗುಂಡು ಕೂಡ ಹಾರಿಲ್ಲ” ಎಂದಿದ್ದಾರೆ.
ಶೇ. 99.5 ರಷ್ಟು ಜಮ್ಮು-ಕಾಶ್ಮೀರದ ಮಕ್ಕಳು ಪರೀಕ್ಷೆಯನ್ನು ಬರೆದಿದ್ದಾರೆ. 7 ಲಕ್ಷ ರೋಗಿಗಳು ಶ್ರೀನಗರದಲ್ಲಿನ ಹೊರರೋಗಿ ವಿಭಾಗಕ್ಕೆ ಭೇಟಿ ಕೊಟ್ಟಿದ್ದಾರೆ ಎಂದಿದ್ದಾರೆ.
ಜಮ್ಮು-ಕಾಶ್ಮೀರದ ಎಲ್ಲಾ ಪೊಲೀಸ್ ವ್ಯಾಪ್ತಿಗಳಿಂದಲೂ ಕರ್ಫ್ಯೂ ಅನ್ನು ಹಿಂಪಡೆಯಲಾಗಿದೆ, ಪೊಲೀಸ್ ಫೈರಿಂಗ್ ಕಾರಣದಿಂದಾಗಿ ಒಬ್ಬನೇ ಒಬ್ಬ ಜೀವನ ಕಳೆದುಕೊಂಡಿಲ್ಲ ಎಂದಿದ್ದಾರೆ.
ಕಳೆದ ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತ್ತು ಮತ್ತು ಜಮ್ಮು-ಕಾಶ್ಮೀರವನ್ನು ಎರಡು ಭಾಗಗಳಾಗಿ ವಿಭಜಿಸಿ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.