ನವದೆಹಲಿ: 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಎದ್ದು ನಿಂತು ಗೌರವವನ್ನು ಸೂಚಿಸಿದರು. ದಾಖಲೆಯ ಮಟ್ಟದಲ್ಲಿ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಕರ್ನಾಟಕದ ಜನತೆಗೆ ಅವರು ಧನ್ಯವಾದಗಳನ್ನು ಸಲ್ಲಿಸಿದರು.
ಪಾರ್ಲಿಮೆಂಟ್ ಲೈಬ್ರೆರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, “ಸಭೆಯ ಸಂದರ್ಭ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ನಾವೆಲ್ಲರೂ ಎದ್ದು ನಿಂತೆವು. ಆದರೆ ಪ್ರಧಾನಿಯವರು ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯ ಸಚಿವರುಗಳು ಮತ್ತು ಕರ್ನಾಟಕದ ಬಿಜೆಪಿ ನಾಯಕತ್ವಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಎದ್ದುನಿಂತು ಕರ್ನಾಟಕದ ಜನತೆಗೆ ಗೌರವವನ್ನು ನೀಡಿದರು” ಎಂದಿದ್ದಾರೆ.
“ನಾವು ಉಪಚುನಾವಣೆಯಲ್ಲಿ ದಾಖಲೆಯ ಮಟ್ಟದಲ್ಲಿ ಗೆಲುವನ್ನು ಸಾಧಿಸಿದ್ದೇವೆ. ಯಾವತ್ತೂ ಗೆದ್ದಿರದ ಎರಡು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಪ್ರಧಾನಿಗಳು ಕರ್ನಾಟಕದ ಜನತೆಗೆ ತಮ್ಮ ಧನ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಸ್ಥಿರ ಸರ್ಕಾರ ರಚನೆಯಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಕ್ಷಿಪ್ರಗತಿಯಲ್ಲಿ ಆಗಲಿದೆ ಎಂಬ ಭರವಸೆಯನ್ನು ಮೋದಿ ಹೊಂದಿದ್ದಾರೆ” ಎಂದಿದ್ದಾರೆ.
15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯು 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಭೂತಪೂರ್ವ ವಿಜಯ ಸಾಧಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.