ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವ ಪೌರತ್ವ ತಿದ್ದುಪಡಿ ಮಸೂದೆಯು ಅಸ್ಸಾಂ ಒಪ್ಪಂದವನ್ನು ದುರ್ಬಲಗೊಳಿಸುತ್ತದೆ ಎಂಬ ತಪ್ಪು ತಿಳುವಳಿಕೆಯನ್ನು ದೂರಮಾಡುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.
ಅಸ್ಸಾಂ ಜನರ ಹಕ್ಕುಗಳನ್ನು ಕಾಪಾಡಲು ಕೇಂದ್ರವು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇ ಸಂಸತ್ತು ಅಂಗೀಕರಿಸಿದ ಪೌರತ್ವ (ತಿದ್ದುಪಡಿ) ಮಸೂದೆಯ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆಯನ್ನು ನೀಡಿದ್ದಾರೆ.
ಈಶಾನ್ಯದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಪೌರತ್ವ (ತಿದ್ದುಪಡಿ) ಮಸೂದೆಯನ್ನು ನಿನ್ನೆ ಸಂಜೆ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ, ರಾಜ್ಯಸಭೆಯು 125 ಪರ ಮತಗಳ ಮತ್ತು 99 ವಿರುದ್ಧ ಮತಗಳ ಮೂಲಕ ಮಸೂದೆಯನ್ನು ಅಂಗೀಕರಿಸಿದೆ
“6ನೇ ಷರತ್ತಿನ ಪ್ರಕಾರ ಅಸ್ಸಾಂ ಜನರ ರಾಜಕೀಯ, ಭಾಷಾ, ಸಾಂಸ್ಕೃತಿಕ ಮತ್ತು ಭೂ ಹಕ್ಕುಗಳನ್ನು ಸಂವಿಧಾನಾತ್ಮಕವಾಗಿ ಕಾಪಾಡಲು ಕೇಂದ್ರ ಸರ್ಕಾರ ಮತ್ತು ನಾನು ಸಂಪೂರ್ಣವಾಗಿ ಬದ್ಧರಾಗಿದ್ದೇವೆ” ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
I want to assure my brothers and sisters of Assam that they have nothing to worry after the passing of #CAB.
I want to assure them- no one can take away your rights, unique identity and beautiful culture. It will continue to flourish and grow.
— Narendra Modi (@narendramodi) December 12, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.