ನ್ಯೂಯಾರ್ಕ್: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೋರ್ಬ್ಸ್ ನಿಯತಕಾಲಿಕೆಯ ವಿಶ್ವದ 100 ಪ್ರಭಾವಿ ಮಹಿಳೆಯರ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಮಾತ್ರವಲ್ಲದೇ, ಎಚ್ಸಿಎಲ್ ಕಾರ್ಪೊರೇಷನ್ ಸಿಇಓ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ರೋಶ್ನಿ ನಾಡರ್ ಮಲ್ಹೋತ್ರ, ಬಯೋಕಾನ್ ಸಂಸ್ಥಾಪಕ ಕಿರಣ್ ಮಜೂಂದಾರ್ ಶಾ ಕೂಡ ಪ್ರಭಾವಿ ಮಹಿಳೆಯರ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
“ವಿಶ್ವದ 100 ಪ್ರಭಾವಿ ಮಹಿಳೆಯರು” ಪಟ್ಟಿಯಲ್ಲಿ ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷ ಕ್ರಿಸ್ಟಿನ್ ಲಗಾರ್ಡೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ ಸ್ಪೀಕರ್ ನ್ಯಾನ್ಸಿ ಪೆಲೊಸಿ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಕೂಡ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
“2019ರಲ್ಲಿ, ಜಗತ್ತಿನಾದ್ಯಂತದ ಮಹಿಳೆಯರು ನೇತೃತ್ವ ವಹಿಸುತ್ತಿದ್ದಾರೆ, ಸರ್ಕಾರ, ವ್ಯವಹಾರ, ಸಮಾಜ ಸೇವೆ ಮತ್ತು ಮಾಧ್ಯಮಗಳಲ್ಲಿ ನಾಯಕತ್ವ ವಹಿಸಿಕೊಳ್ಳುತ್ತಿದ್ದಾರೆ” ಫೋರ್ಬ್ಸ್ ಹೇಳಿದೆ.
ನಿರ್ಮಲಾ ಸೀತಾರಾಮನ್ ಅವರು ಮೊದಲು ಬಾರಿಗೆ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದು, ಅವರಿಗೆ 34ನೇ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಭಾರತದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿದ್ದಾರೆ. ದೇಶದ ರಕ್ಷಣಾ ಸಚಿವೆಯಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.