ನವದೆಹಲಿ: ಯುಕೆ ಚುನಾವಣೆಯಲ್ಲಿ ಜಯ ಗಳಿಸಿರುವ ಅಲ್ಲಿನ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಯುಕೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಅಭೂತಪೂರ್ವ ಗೆಲುವಿನೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಅಭಿನಂದನೆಗಳು. ಅವರಿಗೆ ಶುಭ ಹಾರೈಸುತ್ತೇನೆ, ಭಾರತ-ಯುಕೆ ನಿಕಟವಾಗಿ ಕಾರ್ಯನಿರ್ವಹಿಸುವುದನ್ನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
ಜಾನ್ಸನ್ ಅವರ ಕನ್ಸರ್ವೇಟಿವ್ ಪಾರ್ಟಿ ಬ್ರಿಟನ್ ಪಾರ್ಲಿಮೆಂಟ್ನಲ್ಲಿ ಬಹುಮತವನ್ನು ಗಳಿಸಿದೆ.
ಚುನಾವಣಾ ಪ್ರಚಾರ ಕಾರ್ಯದ ವೇಳೆ ಕನ್ಸರ್ವೇಟಿವ್ ಪಕ್ಷವು ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೋವನ್ನು ಬಳಸಿಕೊಂಡು, ಅನಿವಾಸಿ ಭಾರತೀಯರ ಮತ ಗಳಿಸುವ ಪ್ರಯತ್ನಗಳನ್ನು ಮಾಡಿತ್ತು. “ಬೋರಿಸ್ ಕೊ ಹಮೇ ಜಿತಾನ ಹೇ” ಎಂಬ ಹಾಡನ್ನು ರಚನೆ ಮಾಡಿತ್ತು, ಹಿಂದಿ ಭಾಷೆಯಲ್ಲಿ ಈ ಗೀತೆಯನ್ನು ರಚನೆ ಮಾಡಿದ್ದು ಇದರ ವೀಡಿಯೋಗೆ ಮೋದಿಯವರ ಇಮೇಜ್ ಅನ್ನು ಬಳಕೆ ಮಾಡಿತ್ತು.
Many congratulations to PM @BorisJohnson for his return with a thumping majority. I wish him the best and look forward to working together for closer India-UK ties. pic.twitter.com/D95Z7XXRml
— Narendra Modi (@narendramodi) December 13, 2019
ಬೋರಿಸ್ ಅವರು ನಿರಂತರ ದೇಗುಲಗಳಿಗೆ ತೆರಳಿ ಹಿಂದೂ ಮತದಾರರನ್ನು ಸೆಳೆಯುವ ಕಾರ್ಯವನ್ನು ಮಾಡಿದ್ದರು, ಕಾಶ್ಮೀರ ವಿಷಯದಲ್ಲಿ ಭಾರತದ ನಿಲುವನ್ನು ಸಮರ್ಥಿಸಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.