ಅಮರಾವತಿ: ಐತಿಹಾಸಿಕ ಬೆಳವಣಿಗೆಯೊಂದರಲ್ಲಿ, ಆಂಧ್ರಪ್ರದೇಶದ ವಿಧಾನಸಭೆಯ ಶುಕ್ರವಾರ “ಆಂಧ್ರಪ್ರದೇಶ ದಿಶಾ ಮಸೂದೆ 2019” ಅನ್ನು ಅಂಗೀಕರಿಸಿದೆ. ಮಹಿಳೆಯರು ಮತ್ತು ಮಕ್ಕಳನ್ನು ಲೈಂಗಿಕ ದೌರ್ಜನ್ಯದಿಂದ ಕಾಪಾಡುವ ಸಲುವಾಗಿ ಮಸೂದೆಯನ್ನು ತರಲಾಗಿದೆ.
ಮಹಿಳೆ ಮತ್ತು ಮಕ್ಕಳ ವಿರುದ್ಧದ ದೌರ್ಜನ್ಯ ಪ್ರಕರಣದಲ್ಲಿ ಕ್ಷಿಪ್ರಗತಿಯಲ್ಲಿ ತನಿಖೆಯನ್ನು ನಡೆಸಿ ನ್ಯಾಯವನ್ನು ಒದಗಿಸುವ ಉದ್ದೇಶದೊಂದಿಗೆ ಈ ಮಸೂದೆಯನ್ನು ಅನುಷ್ಠಾನಕ್ಕೆ ತರಲಾಗಿದೆ.
ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣ ಮತ್ತು ಹೈದರಾಬಾದಿನಲ್ಲಿ ನಡೆದ ಅತ್ಯಾಚಾರ ಪ್ರಕರಣಗಳು ಕಾಯ್ದೆಯನ್ನು ಅನುಷ್ಠಾನಗೊಳಿಸುವಂತೆ ಪ್ರೇರೇಪಿಸಿದವು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಆಂಧ್ರಪ್ರದೇಶ ಅಪರಾಧ ಕಾನೂನು ಕಾಯ್ದೆ 2019 ಎಂದು ಕರೆಯಲ್ಪಡುವ ಈ ಮಸೂದೆಯು ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ 21 ದಿನಗಳೊಳಗೆ ಗಲ್ಲುಶಿಕ್ಷೆಯನ್ನು ವಿಧಿಸುವುದಕ್ಕೆ ಅನುವು ಮಾಡಿಕೊಡುತ್ತದೆ.
ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಮೇಲಿನ ಅತ್ಯಾಚಾರವು ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದರು. ಈ ಘಟನೆಯಿಂದ ಎಚ್ಚೆತ್ತುಕೊಂಡಿರುವ ಆಂಧ್ರಪ್ರದೇಶ ದಿಶಾ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದಿದೆ. ಈ ಮೂಲಕ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ತ್ವರಿತವಾಗಿ ಆರೋಪಿಗಳಿಗೆ ಶಿಕ್ಷೆಯನ್ನು ವಿಧಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.