ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸಿ, ತಪ್ಪು ಮಾಹಿತಿಗಳನ್ನು ರವಾನಿಸಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಯಥೇಚ್ಛವಾಗಿ ಇಂತಹ ತಪ್ಪು ಮಾಹಿತಿಗಳನ್ನು ಹಬ್ಬಿಸುವ ಮೂಲಕ ಸಮಾಜದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಇದೇ ಕಾರಣದಿಂದ ಈಶಾನ್ಯ ರಾಜ್ಯಗಳಲ್ಲಿ ಇಂದು ಅಶಾಂತಿ ತಲೆದೋರಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಮಹತ್ವದ ಕ್ರಮವನ್ನು ಕೈಗೊಂಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಹೊರಡಿಸಲಾದ ನಕಲಿ ಸುದ್ದಿಗಳ ವಿರುದ್ಧ ಮಾಹಿತಿಗಳ ವಿರುದ್ಧ ನಿರ್ದೇಶನಗಳನ್ನು ಹೊರಡಿಸಿದೆ. ಜನರಿಗೆ ಸತ್ಯಾಸತ್ಯತೆಯನ್ನು ತಿಳಿಸುವ ಪ್ರಯತ್ನವನ್ನು ಮಾಡಿದೆ.ಈ ಮೂಲಕ ಈಶಾನ್ಯಭಾಗದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕ್ರಮ ಕೈಗೊಂಡಿದೆ.
“ನಕಲಿ ಸುದ್ದಿಗಳು ಮತ್ತು ತಪ್ಪು ಮಾಹಿತಿಯ ವಿರುದ್ಧ ಕಣ್ಗಾವಲಿಡಿ. ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಬ್ಬಿಸುತ್ತಿರುವ ವಿಷಕಾರಿ ಸುಳ್ಳುಗಳು ಮತ್ತು ತಪ್ಪು ಮಾಹಿತಿಗಳ ಬಗ್ಗೆ ರಕ್ಷಿಸಿ’ ಎಂದು ಸೇನೆ ಟ್ವೀಟ್ ಮಾಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಈಶಾನ್ಯಭಾಗದಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂನಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜನೆಗೊಳಿಸಲಾಗಿದೆ.
ಅಸ್ಸಾಮಿನ 10 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.