ನವದೆಹಲಿ: ಪ್ರತಿಭಟನೆ ನಡೆಸುತ್ತಿರುವ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಕಠಿಣ ಎಚ್ಚರಿಕೆ ನೀಡಿದ್ದು, ಗಲಾಟೆಯನ್ನು ನಿಲ್ಲಿಸುವಂತೆ ಹೇಳಿದೆ. ಸಿಜೆಐ ಎಸ್ಎ ಬೊಬ್ಡೆ ಅವರು ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಯ ನಾಶ ಮುಂದುವರಿದರೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
“ಅವರು ವಿದ್ಯಾರ್ಥಿಗಳು ಎಂದ ಮಾತ್ರಕ್ಕೆ, ಅವರು ಕಾನೂನು ಮತ್ತು ಸುವ್ಯವಸ್ಥೆಯನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳಬಹುದು ಎಂದರ್ಥವಲ್ಲ, ವಿಷಯಗಳು ತಣ್ಣಗಾದಾಗ ಇದನ್ನು ನಿರ್ಧರಿಸಬಹುದು. ಇಲ್ಲಿ ಮನಸ್ಸಿಗೆ ಬಂದಂತೆ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ. ಗಲಭೆಗೆ ಅವಕಾಶ ಮಾಡಿಕೊಡುವುದನ್ನು ನಿಲ್ಲಿಸಿ, ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.
ಹಿರಿಯ ವಕೀಲ ಇಂದಿರಾ ಜೈಸಿಂಗ್ ಅವರು ವಿದ್ಯಾರ್ಥಿಗಳ ಮೇಲಿನ ಪೊಲೀಸರ ಕ್ರಮಗಳನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕರೆದು, ಈ ವಿಷಯದ ಬಗ್ಗೆ ಸುಯೊಮೋಟೋ ಕಾಗ್ನಿಜೆನ್ಸ್ ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದರು.
ಆದರೆ ಸಿಜೆಐ ಬೊಬ್ಡೆ ಅವರು ಪ್ರಕರಣವನ್ನು ಗಲಭೆ ನಿಂತ ನಂತರವೇ ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. “ನಾವು ಹಕ್ಕುಗಳನ್ನು ನಿರ್ಧರಿಸುತ್ತೇವೆ ಆದರೆ ಗಲಭೆಯ ವಾತಾವರಣದಲ್ಲಿ ಅಲ್ಲ, ಈ ಎಲ್ಲವನ್ನೂ ನಿಲ್ಲಿಸಿದ ನಂತರ ನಾವು ಸುಮೊ ಮೋಟು ಕಾಗ್ನಿಜೆನ್ಸ್ ತೆಗೆದುಕೊಳ್ಳುವ ಬಗ್ಗೆ ನಿರ್ಧರಿಸುತ್ತೇವೆ. ನಾವು ಹಕ್ಕುಗಳು ಮತ್ತು ಶಾಂತಿಯುತ ಪ್ರತಿಭಟನೆಯ ವಿರೋಧಿಗಳಲ್ಲ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.