ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಚುನಾವಣೆ ಇಂದು ಜರುಗುತ್ತಿದೆ. ಒಟ್ಟು 15 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, 48 ಲಕ್ಷ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು ಐದು ಹಂತದಲ್ಲಿ ಇಲ್ಲಿ ಚುನಾವಣೆ ನಡೆಯುತ್ತಿದೆ. 221 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಲಿದ್ದಾರೆ.
22 ಮಹಿಳೆಯರು ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳು ಸೇರಿದಂತೆ 221 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಒಟ್ಟು ಮತದಾರರ ಸಂಖ್ಯೆ 47,85,009, ಅದರಲ್ಲಿ 25,40,794 ಪುರುಷ ಮತದಾರರು ಮತ್ತು 22,44,134 ಮಹಿಳಾ ಮತದಾರರು. ವಿಶೇಷ ಸಾಮರ್ಥ್ಯ ಹೊಂದಿರುವ ಮತದಾರರ ಸಂಖ್ಯೆ 66,321 ಮತ್ತು 80 ವರ್ಷಕ್ಕಿಂತ ಮೇಲ್ಪಟ್ಟ ಒಟ್ಟು ಮತದಾರರ ಸಂಖ್ಯೆ 34,106.
ನಾಲ್ಕನೇ ಹಂತದ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳು ಮಧುಪುರ, ದಿಯೋಘರ್, ಬಾಗೋದರ್, ಜಮುವಾ, ಗಂಡೆ, ಗಿರಿಡಿಹ್, ಡುಮ್ರಿ, ಬೊಕಾರೊ, ಚಂದಂಕಯರಿ, ಸಿಂಧ್ರಿ, ನಿರ್ಸಾ, ಧನ್ಬಾದ್, ಜಾರಿಯಾ, ತುಂಡಿ, ಮತ್ತು ಬಾಗ್ಮರಾ.
ಜಮುವಾ, ಬಾಗೋದರ್, ಗಿರಿಡಿಹ್, ಡುಮ್ರಿ ಮತ್ತು ತುಂಡಿ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಲಿದೆ, ಉಳಿದ ಸ್ಥಾನಗಳಲ್ಲಿ ಸಂಜೆ 5 ರ ವೇಳೆಗೆ ಮತದಾನ ಮುಕ್ತಾಯಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.