ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಪಶ್ಚಿಮಬಂಗಾಳ, ದೆಹಲಿ, ಅಸ್ಸಾಂ ಮುಂತಾದ ಕಡೆಗಳಲ್ಲಿ ಪ್ರತಿಭಟನೆಗಳು ಹಿಂಸಾ ರೂಪಕ್ಕೆ ತಿರುಗಿವೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ, ಶಾಂತಿ ಕಾಪಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇಂದು ಟ್ವಿಟ್ ಮಾಡಿರುವ ಪ್ರಧಾನಿ ಮೋದಿಯವರು, “ಪೌರತ್ವ (ತಿದ್ದುಪಡಿ) ಮಸೂದೆ ಭಾರತದ ಯಾವುದೇ ಧರ್ಮದ ನಾಗರಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನಾನು ದೇಶವಾಸಿಗಳಿಗೆ ನಿಸ್ಸಂದಿಗ್ಧವಾಗಿ ಭರವಸೆ ನೀಡಲು ಬಯಸುತ್ತೇನೆ. ಈ ಕಾಯ್ದೆಯ ಬಗ್ಗೆ ಯಾವುದೇ ಭಾರತೀಯರು ಚಿಂತೆ ಮಾಡುವ ಅಗತ್ಯವಿಲ್ಲ. ಹೊರಗೆ ಹಲವಾರು ವರ್ಷಗಳಿಂದ ದೌರ್ಜನ್ಯ ಎದುರಿಸುತ್ತಿರುವ ಮತ್ತು ಭಾರತವನ್ನು ಹೊರತುಪಡಿಸಿ ಬೇರೆ ಸ್ಥಳವಿಲ್ಲದ ಜನರಿಗೆ ಮಾತ್ರ ಈ ಕಾಯ್ದೆ ಅನ್ವಯಿಸುತ್ತದೆ” ಎಂದಿದ್ದಾರೆ.
“ಇದು ಶಾಂತಿ, ಐಕ್ಯತೆ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳುವ ಸಮಯ. ಯಾವುದೇ ತರನಾದ ವದಂತಿಗಳು ಮತ್ತು ಸುಳ್ಳುಗಳಿಂದ ದೂರವಿರಿ ಎಂಬುದು ಎಲ್ಲರಿಗೂ ನನ್ನ ಮನವಿ” ಎಂದಿದ್ದಾರೆ.
ಭಾರತದ ಅಭಿವೃದ್ಧಿ ಮತ್ತು ಪ್ರತಿಯೊಬ್ಬ ಭಾರತೀಯರ ಅದರಲ್ಲೂ ವಿಶೇಷವಾಗಿ ಬಡವರು, ದೀನ ದಲಿತರು ಮತ್ತು ಹಿಂದುಳಿದವರ ಸಬಲೀಕರಣಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವುದು ಸಮಯದ ಅವಶ್ಯಕತೆಯಾಗಿದೆ. ನಮ್ಮನ್ನು ವಿಭಜಿಸಲು ಮತ್ತು ಗೊಂದಲವನ್ನು ಸೃಷ್ಟಿಸಲು ನಾವು ಪಟ್ಟಭದ್ರ ಹಿತಾಸಕ್ತಿ ಗುಂಪುಗಳಿಗೆ ಅನುವು ಮಾಡಿಕೊಡಬಾರದು” ಎಂದಿದ್ದಾರೆ.
This is the time to maintain peace, unity and brotherhood. It is my appeal to everyone to stay away from any sort of rumour mongering and falsehoods.
— Narendra Modi (@narendramodi) December 16, 2019
The need of the hour is for all of us to work together for the development of India and the empowerment of every Indian, especially the poor, downtrodden and marginalised.
We cannot allow vested interest groups to divide us and create disturbance.
— Narendra Modi (@narendramodi) December 16, 2019
I want to unequivocally assure my fellow Indians that CAA does not affect any citizen of India of any religion. No Indian has anything to worry regarding this Act. This Act is only for those who have faced years of persecution outside and have no other place to go except India.
— Narendra Modi (@narendramodi) December 16, 2019
The Citizenship Amendment Act, 2019 was passed by both Houses of Parliament with overwhelming support. Large number of political parties and MPs supported its passage. This Act illustrates India’s centuries old culture of acceptance, harmony, compassion and brotherhood.
— Narendra Modi (@narendramodi) December 16, 2019
ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿಗೊಟ್ಟು ಜನರು ಬೀದಿಗಿಳಿದು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಜಾಮಿಯಾ, ಅಲಿಘಢ ಮುಸ್ಲಿಂ ಯೂನಿವರ್ಸಿಟಿಗಳಲ್ಲಿ ವಿದ್ಯಾರ್ಥಿಗಳ ಪುಂಡಾಟ ತಾರಕಕ್ಕೇರಿದೆ. ಹಿಂಸೆ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್ ಅವರಿಗೆ ತಾಕೀತು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.