ನವದೆಹಲಿ: 2017 ರಲ್ಲಿ ಉತ್ತರಪ್ರದೇಶದ ಉನ್ನಾವೊದಲ್ಲಿ ಮಹಿಳೆಯೊಬ್ಬರ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿಂತೆ ಇಂದು ದೆಹಲಿ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿ ಕುಲದೀಪ್ ಸಿಂಗ್ ಸೇನ್ಗರ್ ತಪ್ಪಿತಸ್ಥ ಎಂದು ಘೋಷಿಸಿದೆ. ಡಿಸೆಂಬರ್ 19 ರಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಗುವುದು ಎಂದು ಹೇಳಿದೆ.
ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮಾ ಅವರು ತೀರ್ಪು ಪ್ರಕಟಿಸಿದ್ದು, ಸಹ ಆರೋಪಿಗಳಾದ ಶಶಿ ಸಿಂಗ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ.
2017ರಲ್ಲಿ ಉನ್ನಾವೊ ಮಹಿಳೆ ಅಪ್ರಾಪ್ತ ವಯಸ್ಸಿನವಳಾಗಿದ್ದಾಗ ಸೇನ್ಗರ್ ಅಪಹರಿಸಿ ಅತ್ಯಾಚಾರ ಎಸಗಿದ್ದನು. ಯುಪಿಯ ಬ್ಯಾಂಗರ್ಮೌದಿಂದ ನಾಲ್ಕು ಬಾರಿ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸಿಂಗ್ ಅನ್ನು 2019 ರ ಆಗಸ್ಟ್ನಲ್ಲಿ ಪಕ್ಷದಿಂದ ಹೊರಹಾಕಲಾಯಿತು.
ನ್ಯಾಯಾಲಯವು ಆಗಸ್ಟ್ 9 ರಂದು ಸಿಂಗ್ ವಿರುದ್ಧ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 363 (ಅಪಹರಣ), 366 (ಮಹಿಳೆಯನ್ನು ಅಪಹರಿಸುವುದು ಅಥವಾ ಮದುವೆಗೆ ಒತ್ತಾಯಿಸಲು ಪ್ರೇರೇಪಿಸುವುದು), 376 (ಅತ್ಯಾಚಾರ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು ದಾಖಲು ಮಾಡಿತ್ತು.
ಸಂತ್ರಸ್ಥೆಯು ಇತ್ತೀಚಿಗೆ ನ್ಯಾಯಾಲಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.