ರಾಂಚಿ: ಇನ್ನು ನಾಲ್ಕು ತಿಂಗಳೊಳಗೆ ಅಯೋಧ್ಯಾದಲ್ಲಿ ಭವ್ಯ ರಾಮ ಮಂದಿರವನ್ನು ನಿರ್ಮಾಣ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
ಜಾರ್ಖಾಂಡಿನಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಅಯೋಧ್ಯಾ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪನ್ನು ನೀಡಿದೆ. ಇನ್ನು ನಾಲ್ಕು ತಿಂಗಳಲ್ಲಿ ಗಗನವನ್ನು ಚುಂಬಿಸುವಂತಹ ಭವ್ಯ ರಾಮಮಂದಿರವನ್ನು ನಿರ್ಮಾಣ ಮಾಡುತ್ತೇವೆ” ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ ಅವರು, ಆ ಪಕ್ಷ ಈ ದೇಶವನ್ನು ಎಂದಿಗೂ ಸುರಕ್ಷಿತವಾಗಿ ಇಡಲಿಲ್ಲ, ಈ ದೇಶದ ಜನರ ಭಾವನೆಯನ್ನೂ ಅರ್ಥ ಮಾಡಿಕೊಳ್ಳಲಿಲ್ಲ ಎಂದಿದ್ದಾರೆ.
ಅಯೋಧ್ಯಾ ಪ್ರಕರಣವನ್ನು ಇತ್ಯರ್ಥಗೊಳಿಸುವುದು ಕಾಂಗ್ರೆಸ್ ಪಕ್ಷಕ್ಕೆ ಇಷ್ಟವಿರಲಿಲ್ಲ, ಕಪಿಲ್ ಸಿಬಲ್ ಅವರು ಈಗ ವಿಚಾರಣೆ ನಡೆಸುವುದು ಬೇಡ ಎಂದು ಸುಪ್ರೀಂಕೋರ್ಟಿಗೆ ಮನವಿ ಮಾಡಿಕೊಂಡಿದ್ದರು. ಅಯೋಧ್ಯಾ ವಿವಾದ ಮುಕ್ತಾಯಗೊಂಡರೆ ಅವರಿಗೆ ಏನು ಕಷ್ಟ ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.