ನವದೆಹಲಿ: ಮೋದಿ ಸರ್ಕಾರ ತನ್ನದೇ ಜನರ ಮೇಲೆ ಯುದ್ಧ ಘೋಷಿಸಿದೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಾಗ್ದಾಳಿ ನಡೆಸಿದ್ದು, ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಮೊಸಳೆ ಕಣ್ಣೀರು ಹರಿಸುತ್ತಿದ್ದಾರೆ ಎಂದಿದ್ದಾರೆ.
ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಪಕ್ಷದ ಹಿಂದಿನ ದಾಖಲೆಯನ್ನು ಪ್ರಶ್ನಿಸಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಆಡಳಿತದಲ್ಲಿ ದೆಹಲಿ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು ಎಂಬುದನ್ನು ಅವರು ನೆನಪಿಸಿಕೊಂಡಿದ್ದಾರೆ. ಆ ಸಮಯದಲ್ಲಿ ಪೊಲೀಸರು ವಿಶ್ವವಿದ್ಯಾನಿಲಯವನ್ನು ಪ್ರವೇಶಿಸಿದ್ದರು ಮತ್ತು ಇಡೀ ಶೈಕ್ಷಣಿಕ ವರ್ಷವನ್ನು ಶೂನ್ಯ ಮತ್ತು ಅನೂರ್ಜಿತವೆಂದು ಘೋಷಿಸಲಾಯಿತು ಎಂದು ಅವರು ಹೇಳಿದ್ದಾರೆ.
ಸೋನಿಯಾ ಗಾಂಧಿಯವರು ಮೋದಿ ಸರ್ಕಾರದ ಬಗ್ಗೆ ಮಾಡಿದ ಹೇಳಿಕೆಗಳು ಬೇಜವಾಬ್ದಾರಿಯುತ ಮತ್ತು ರಾಜಕೀಯ ಪ್ರೇರಿತವಾಗಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ದೌರ್ಜನ್ಯದ ಕುರಿತು ಹೇಳಿಕೆ ನೀಡಿದ್ದ ಸೋನಿಯಾ ಗಾಂಧಿ ಅವರು, ಬಿಜೆಪಿ ಸರ್ಕಾರ ತನ್ನದೇ ಜನರ ಮೇಲೆ ಯುದ್ಧ ಘೋಷಿಸಿದೆ ಎಂದು ಹೇಳಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಸೀತಾರಾಮನ್, ರಾಜಕೀಯ ಲಾಭಕ್ಕಾಗಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ. ಅಲ್ಲದೇ, 1984 ಸಿಖ್ ದಂಗೆಯ ಸಂದರ್ಭದಲ್ಲಿ ಉದ್ರಿಕ್ತ ಜನರನ್ನು ನಿಯಂತ್ರಿಸಲು ಕಾಂಗ್ರೆಸ್ ಸರ್ಕಾರ ಯಾವ ಕ್ರಮವನ್ನು ಕೈಗೊಂಡಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2003 ರಲ್ಲಿ ಸಂಸತ್ತಿನಲ್ಲಿ ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವಲ್ಲಿ ಹೆಚ್ಚು ಉದಾರವಾದಿಗಳಾಗಿದ್ದೇವೆ ಎಂದು ಕೇಳಿಕೊಂಡಿದ್ದನ್ನು ಉಲ್ಲೇಖಿಸಿದ ಸೀತಾರಾಮನ್, ಕಾಂಗ್ರೆಸ್ ಅಧ್ಯಕ್ಷರು ಮತ್ತು ಅವರ ಪಕ್ಷವು ತಮ್ಮ ನಿಲುವನ್ನು ಈಗ ಬದಲಾಯಿಸಿದೆಯೇ ಎಂದು ಎಂದು ಅವರು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.