ನವದೆಹಲಿ: ದೆಹಲಿ ಪೊಲೀಸರು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಡುವೆ ನಡೆದ ಹಿಂಸಾತ್ಮಕ ಘಟನೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಹತ್ತು ಜನರನ್ನು ಮಂಗಳವಾರ ಬಂಧಿಸಲಾಗಿದೆ. ಬಂಧಿತರಲ್ಲಿ ಯಾರೊಬ್ಬರೂ ವಿದ್ಯಾರ್ಥಿಗಳಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ನಡೆದ ಪ್ರತಿಭಟನೆಯಲ್ಲಿ ದೆಹಲಿ ಪೊಲೀಸರು 15 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಪ್ರತಿಭಟನಾಕಾರರು ನ್ಯೂ ಫ್ರೆಂಡ್ಸ್ ಕಾಲೋನಿ ಬಳಿ ನಾಲ್ಕು ಬಸ್ಸುಗಳಿಗೆ ಬೆಂಕಿ ಹಚ್ಚಿದ್ದು, ಈ ಘಟನೆಯಿಂದ ಕನಿಷ್ಠ ಆರು ಪೊಲೀಸರು ಮತ್ತು ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಸರೈ ಜುಲೆಮಾ ಸ್ಥಳೀಯರು ಜಾಮಿಯಾ ನಗರದಲ್ಲಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರು. ಪೊಲೀಸರು ಕ್ರಮ ಕೈಗೊಂಡಾಗ ಪರಿಸ್ಥಿತಿ ಗಂಭೀರವಾಗಿದೆ. ಘರ್ಷಣೆಯಲ್ಲಿ ಹಲವಾರು ಜಾಮಿಯಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸುಮಾರು 100 ವಿದ್ಯಾರ್ಥಿಗಳನ್ನು ಸಹ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ, ಆದರೆ ನಂತರ ಬಿಡುಗಡೆ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ದೆಹಲಿ ಪೊಲೀಸ್ ಆಗ್ನೇಯ ಆಯುಕ್ತ ಚಿನ್ಮೊಯ್ ಬಿಸ್ವಾಲ್, ಸುಮಾರು 2 ಸಾವಿರ ಜನರ ಗುಂಪು ಹಿಂಸಾತ್ಮಕ ಕೃತ್ಯದಲ್ಲಿ ತೊಡಗಿಕೊಂಡಿದೆ ಮತ್ತು ಸಾರ್ವಜನಿಕ ಸಾರಿಗೆ ಬಸ್ಸುಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದರು.
“ಈ ಜನಸಮೂಹ ಹಿಂಸಾತ್ಮಕವಾಗಿತ್ತು. ಕಲ್ಲು ತೂರಾಟದಲ್ಲಿ ಸುಮಾರು 6 ಪೊಲೀಸರು ಗಾಯಗೊಂಡಿದ್ದಾರೆ. ನಾವು ಇನ್ನೂ ಅವರು ಗುರುತುಗಳನ್ನು ಕಂಡುಹಿಡಿದಿಲ್ಲ” ಎಂದು ಬಿಸ್ವಾಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.