ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ದೇಶಾದ್ಯಂತ ಹಲವಾರು ಸ್ಥಳಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಈ ಪ್ರತಿಭಟನೆಗಳ ಹಿಂದೆ ಕೆಲವು ರಾಜಕೀಯ ಪಕ್ಷಗಳು ಮತ್ತು ನಿಷೇಧಿತ ಇಸ್ಲಾಮಿಕ್ ಸಂಘಟನೆಗಳಾದ ಸಿಮಿ ಮತ್ತು ಪಿಎಫ್ಐಗಳು ಇವೆ ಎಂದು ಗೃಹ ಸಚಿವಾಲಯಕ್ಕೆ ಸಲ್ಲಿಸಲಾದ ಗುಪ್ತಚರ ವರದಿ ತಿಳಿಸಿದೆ.
ವರದಿಗಳ ಪ್ರಕಾರ, ಕಳೆದ ವಾರ ಸಲ್ಲಿಸಿದ ಗುಪ್ತಚರ ವರದಿಯಲ್ಲಿ ಹಿಂಸಾಚಾರ ಮತ್ತು ಅಶಾಂತಿಗೆ ನಿಷೇಧಿತ ಇಸ್ಲಾಮಿಕ್ ಸಂಘಟನೆಗಳ ಕೈವಾಡ ಇದೆ ಎಂದು ಉಲ್ಲೇಖಿಸಲಾಗಿದೆ.
ಭಾನುವಾರ ನಡೆದ ಹಿಂಸಾತ್ಮಕ ಪ್ರತಿಭಟನೆಗಳು, ಕಲ್ಲು ತೂರಾಟ ಮತ್ತು ಜನಸಮೂಹದ ದಾಳಿಗಳು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ದೆಹಲಿ ಪೊಲೀಸರನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಆವರಣಕ್ಕೆ ಪ್ರವೇಶಿಸುವಂತೆ ಮಾಡಿತು.
“ಕೆಲವು ರಾಜಕೀಯ ಪಕ್ಷಗಳು ವಿವಿಧ ಸ್ಥಳಗಳಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಪ್ರಚೋದಿಸಿದವು, ಉಗ್ರಗಾಮಿ ಮತ್ತು ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಗಳು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ)ಗಳು ಪ್ರತಿಭಟನೆಯನ್ನು ಹಿಂಸಾ ರೂಪಕ್ಕೆ ತಿರುಗಿಸಿವೆ” ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ದೇಶದ ಕಾನೂನು ಸುವ್ಯವಸ್ಥೆ ಅಡ್ಡಿಪಡಿಸುವುದು ಅವರ ಉದ್ದೇಶವಾಗಿದೆ ಎಂದು ಅದು ಹೇಳಿದೆ. ಗುಪ್ತಚರ ವರದಿಯು, ಹಲವಾರು ರಾಜ್ಯಗಳಲ್ಲಿ ಹಿಂಸಾಚಾರವನ್ನು ಹರಡಲು ದುಷ್ಕರ್ಮಿಗಳು ಯೋಜಿಸುತ್ತಿದ್ದಾರೆ ಎಂದು ಹೇಳಿದೆ.
ಪಿಎಫ್ಐನ ಹಲವಾರು ವಿದ್ಯಾರ್ಥಿಗಳು ಸಾಮಾಜಿಕ ಸಂಸ್ಥೆಗಳನ್ನು ಹೊಂದಿದ್ದಾರೆ ಮತ್ತು ಪರಿಸ್ಥಿತಿಯ ಲಾಭವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸಿಮಿ, ಕೆಲವು ರಾಜಕೀಯ ಪಕ್ಷಗಳಿಗೆ ಸಹಾಯವನ್ನು ಪಡೆದುಕೊಂಡು ತನ್ನ ಸ್ಲೀಪರ್ ಸೆಲ್ಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದೆ ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.