ನವದೆಹಲಿ: 2012ರ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಸಿಂಗ್ ಠಾಕೂರ್ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ. ನ್ಯಾಯಮೂರ್ತಿ ಭಾನುಮತಿ, ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ಎ.ಎಸ್.ಬೋಪಣ್ಣ ಅವರ ನೇತೃತ್ವದಲ್ಲಿ ಹೊಸದಾಗಿ ರಚಿಸಲಾದ ಮೂರು ಸದಸ್ಯರ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು.
ಬುಧವಾರ ಮಧ್ಯಾಹ್ನ 1 ಗಂಟೆಗೆ ತೀರ್ಪು ಪ್ರಕಟವಾಗಿದ್ದು, ಅಕ್ಷಯ್ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಈ ಮೂಲಕ ಘೋರ ಅಪರಾಧದಲ್ಲಿ ಭಾಗಿಯಾದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸುವ ಮಾರ್ಗ ಸುಲಲಿತಗೊಂಡಿದೆ.
ತೀರ್ಪಿನ ನಂತರ ಅಕ್ಷಯ್ ವಕೀಲರು ಅಪರಾಧಿ ಭಾರತದ ರಾಷ್ಟ್ರಪತಿಯ ಮುಂದೆ ಕ್ಷಮಾಧಾನ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದಾನೆ, ಇದಕ್ಕಾಗಿ ಮೂರು ವಾರಗಳ ಸಮಯವನ್ನು ಬಯಸುತ್ತಿದ್ದಾನೆ ಸುಪ್ರೀಂಕೋರ್ಟಿಗೆ ತಿಳಿಸಿದ್ದಾರೆ. ಇದಕ್ಕೆ ಸುಪ್ರೀಂಕೋರ್ಟ್ ಸಮ್ಮತಿಯನ್ನು ಸೂಚಿಸಿದೆ.
ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ಪರಿಶೀಲನೆ ಸಲ್ಲಿಸಲು ಏಳು ದಿನಗಳನ್ನು ನೀಡಬಹುದು ಮತ್ತು ರಾಷ್ಟ್ರಪತಿಗಳ ಮುಂದೆ ಕ್ಷಮಾಪಣೆ ಅರ್ಜಿಯನ್ನು ಸಲ್ಲಿಸಲು ಒಂದು ವಾರ ನಿಗದಿಪಡಿಸಲಾಗಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.