ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಟ್ವಿಟ್ಟರ್ನಲ್ಲಿ ಭಾರತದ ಅಪೂರ್ಣ ನಕ್ಷೆಯನ್ನು ಪೋಸ್ಟ್ ಮಾಡುವ ಮೂಲಕ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ. ಲಡಾಕ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳು ಇಲ್ಲದ ಭೂಪಟವನ್ನು ಅವರು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ತಮ್ಮ ಭಾರತ ವಿರೋಧಿ ನಿಲುವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಕಾಂಗ್ರೆಸ್ನ ಸಿಎಎ ವಿರೋಧಿ ಅಭಿಯಾನ ‘ಭಾರತ್ ಬಚಾವೊ’ ಬಗ್ಗೆ ಟ್ವಿಟ್ ಮಾಡುವಾಗ ಅವರು ಈ ಎಡವಟ್ಟನ್ನು ಮಾಡಿಕೊಂಡಿದ್ದಾರೆ.
ಕೇರಳದ ಕೋಝಿಕೋಡ್ನಲ್ಲಿ ಕಾಂಗ್ರೆಸ್ ಪಕ್ಷವು ಸಿಎಎ ವಿರೋಧಿ ಪ್ರತಿಭಟನಾ ಸಮಾವೇಶಕ್ಕಾಗಿ ವಿನ್ಯಾಸಗೊಳಿಸಿದ ಪೋಸ್ಟರ್ ಅನ್ನು ಶಶಿ ತರೂರ್ ಟ್ವೀಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಹೆಸರಿನಲ್ಲಿ ರಾಷ್ಟ್ರವನ್ನು ಅವಮಾನಿಸಲು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಮಾಡಿದ ಪ್ರಯತ್ನದ ಬಗ್ಗೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕ್ರೋಶದ ಬಿಸಿ ಮುಟ್ಟುತ್ತಲೇ ತರೂರ್ ಟ್ವೀಟ್ ಅನ್ನು ಅಳಿಸಿದ್ದಾರೆ.
ಕಾಂಗ್ರೆಸ್ ಮತ್ತು ಮಾಧ್ಯಮಗಳ ಒಂದು ಭಾಗವು ದೇಶದಲ್ಲಿ ಪ್ರಚೋದಿಸುತ್ತಿರುವ ಗಲಭೆಗಳ ನಡುವೆಯೇ, ಶಶಿ ತರೂರ್ ಅವರು ಮಾಡಿದ ಟ್ವೀಟ್ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಯನ್ನು ಪ್ರಶ್ನೆ ಮಾಡುವಂತೆ ಇದೆ. ಅವರ ಈ ಕಾರ್ಯಕ್ಕೆ ದೇಶದ ನಾನಾ ಭಾಗಗಳಿಂದ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ.
Shashi Tharoor has symbolically used India’s incomplete map in his party’s protest against the national integrity. Today, an India without Kashmir… What they aim by instigating riots across the nation is that an India without West Bengal? pic.twitter.com/AMDVBwqdE5
— J Nandakumar (@kumarnandaj) December 21, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.