ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ಉಪಟಳ ಆರಂಭಿಸಿದ್ದಾರೆ. ಗುರುವಾರ ಬೆಳಿಗ್ಗೆ ಸೇನಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಬಾರಮುಲ್ಲಾ ಜಿಲ್ಲೆಯ ತಂಗ್ಮರ್ಗ್ ನಗರದ ಹರ್ದುಶೂರಗ್ರಾಮದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಯೋಧರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ತಕ್ಷಣವೇ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಈ ಸಂದರ್ಭ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ.
ಘಟನೆಯಲ್ಲಿ ಇದುವರೆಗೆ 4 ಮಂದಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿ ಇನ್ನೂ ಮುಂದುವರೆದಿದ್ದು ಉಗ್ರರನ್ನು ಹೊಡೆದುರುಳಿಸಲು ಸೇನಾ ಪಡೆ ಪ್ರಯತ್ನ ಮುಂದುವರೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.