ತಿರುವನಂತಪುರಂ: ಕೇರಳ ರಾಜ್ಯಪಾಲ, ರಾಜೀವ್ ಗಾಂಧೀ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಆರೀಫ್ ಮೊಹಮ್ಮದ್ ಖಾನ್ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ನಿಂತಿದ್ದಾರೆ. ಈ ಕಾಯ್ದೆಯು ಮಹಾತ್ಮ ಗಾಂಧಿ ಮತ್ತು ದೇಶದ ಮೊದಲ ಪ್ರಧಾನಮಂತ್ರಿ ಜವಹಾರ್ ಲಾಲ್ ನೆಹರೂ ಅವರು ನೀಡಿರುವ ಭರವಸೆಯನ್ನು ಈಡೇರಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಪಾಕಿಸ್ಥಾನದಲ್ಲಿನ ಅಲ್ಪಸಂಖ್ಯಾತರಿಗೆ ಮಹಾತ್ಮ ಗಾಂಧೀಜಿ ಮತ್ತು ಜವಹಾರ್ ಲಾಲ್ ನೆಹರೂ ಅವರು ಪೌರತ್ವ ನೀಡುವ ಹಕ್ಕಿನ ಬಗ್ಗೆ ಭರವಸೆಯನ್ನು ನೀಡಿದ್ದರು. ಮಾತ್ರವಲ್ಲದೇ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹಿಂದೆ ಭಾರತಕ್ಕೆ ಆಗಮಿಸಿದ ನಿರಾಶ್ರಿತರ ಹಕ್ಕುಗಳ ಬಗ್ಗೆ ಪ್ರತಿಪಾದಿಸಿದ್ದರು ಎಂದು ಆರೀಫ್ ಖಾನ್ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ, 2019 ಒಂದು ಸಮುದಾಯದ ಬಗ್ಗೆ ತಾರತಮ್ಯ ಧೋರಣೆಯನ್ನು ಅನುಸರಿಸಿದೆ ಎಂದು ಬಿಂಬಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಭಜನೆಯ ನಂತರ ಪಾಕಿಸ್ಥಾನದಲ್ಲಿ ಉಳಿದುಕೊಂಡ ಮುಸ್ಲಿಮೇತರ ಜನರಿಗೆ ಕಾಂಗ್ರೆಸ್ ನಾಯಕರು ನೀಡಿದ ಭರವಸೆಯನ್ನು ಈ ಕಾಯ್ದೆ ಈಡೇರಿಸುತ್ತದೆ ಎಂದು ಅವರು ಹೇಳಿದ್ದಾರೆ. ಈ ಕಾಯ್ದೆಯು ನಿರಾಶ್ರಿತರಿಗೆ ಉದ್ಯೋಗ, ಪೌರತ್ವ ಮತ್ತು ಆರಾಮದಾಯಕ ಜೀವನವನ್ನು ಒದಗಿಸುವ ಭಾರತ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದಿದ್ದಾರೆ.
ಪಾಕಿಸ್ಥಾನದ ಹಿಂದೂಗಳು ಮತ್ತು ಸಿಖ್ಖರಿಗೆ ಪಾಕಿಸ್ಥಾನದಲ್ಲಿ ವಾಸಿಸಲು ಸಾಧ್ಯವಾಗದಿದ್ದರೆ ಅವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿದೆ ಎಂದು 1947 ರ ಜುಲೈ 7 ರಂದು ಮಹಾತ್ಮ ಗಾಂಧಿಯವರು ಹೇಳಿದ ಮಾತನ್ನು ಆರೀಫ್ ಖಾನ್ ಅವರು ಉಲ್ಲೇಖಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.