ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಜನರು ಭಾರತದಾದ್ಯಂತ ಪೊಲೀಸ್ ಮತ್ತು ಸಶಸ್ತ್ರ ಪಡೆಗಳ ಮೇಲೆ ನಡೆಸಿದ ಹಿಂಸಾತ್ಮಕ ದಾಳಿಯನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ.
ಭದ್ರತಾ ಪಡೆಗಳ ಮೇಲಿನ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು ಕೌನ್ಸಿಲ್ ಪ್ರತಿಪಾದಿಸಿದೆ. ಅಲ್ಲದೇ, ಇತ್ತೀಚೆಗೆ ರಾಷ್ಟ್ರವ್ಯಾಪಿಯಾಗಿ ಹರಡಿರುವ ಹಿಂಸಾಚಾರವನ್ನು ತಗ್ಗಿಸುವ ನಿಟ್ಟಿನಲ್ಲಿ ನಾಯಕರು ಮತ್ತು ಯುವಕರು ಕಾರ್ಯವನ್ನು ಮಾಡಬೇಕು ಎಂದು ಅದು ಒತ್ತಾಯಿಸಿದೆ.
ತಿದ್ದುಪಡಿ ಮಾಡಿದ ಕಾಯಿದೆಯ ವಿಷಯವು ಸುಪ್ರೀಂ ಕೋರ್ಟ್ನ ಪರಿಶೀಲನೆಗೆ ಒಳಪಟ್ಟಿದೆ, ಪ್ರತಿಭಟನಾಕಾರರು ಕನಿಷ್ಠಪಕ್ಷ ನ್ಯಾಯಾಲಯದ ಮೇಲೆಯಾದರೂ ನಂಬಿಕೆಯನ್ನು ಇಟ್ಟುಕೊಳ್ಳಬೇಕು, ಈ ಬಗ್ಗೆ ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಬೇಕು ಎಂದು ವಕೀಲರ ಸಂಘಟನೆ ಆಗ್ರಹಿಸಿದೆ.
ಕೌನ್ಸಿಲ್ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯನ್ನು ಹಿಂಸಾತ್ಮಕ ಪ್ರತಿಭಟನಾಕಾರರು ಧ್ವಂಸಗೊಳಿಸುವುದನ್ನು ಕಟುವಾಗಿ ಖಂಡಿಸಿದೆ ಮತ್ತು ವಕೀಲರು, ಬಾರ್ ಅಸೋಸಿಯೇಷನ್ಗಳು, ರಾಜ್ಯ ಬಾರ್ ಕೌನ್ಸಿಲ್ಗಳು ಮತ್ತು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಮತ್ತು ಇತರ ಕಾನೂನು ಕಾಲೇಜುಗಳ ವಿದ್ಯಾರ್ಥಿ ಸಂಘಗಳು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.