ನವದೆಹಲಿ: ಎರಡು ವರ್ಷಗಳ ನಿಗದಿತ ಅವಧಿಗೆ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ್ ಶ್ರೀಂಗ್ಲಾ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ. ಅವರು ಹಾಲಿ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಅವರ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) 1984 ರ ಬ್ಯಾಚ್ ಅಧಿಕಾರಿಯಾಗಿರುವ ಶ್ರಿಂಗ್ಲಾ ಅವರನ್ನು ಭಾರತದ ನೆರೆಹೊರೆಯ ಬಗೆಗಿನ ಪರಿಣಿತರೆಂದು ಪರಿಗಣಿಸಲಾಗಿದೆ ಮತ್ತು ಪ್ರಸ್ತುತ ಯುಎಸ್ಗೆ ರಾಯಭಾರಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಹೆಚ್ಚುತ್ತಿರುವ ಟ್ರಂಪ್ ಆಡಳಿತದ ಪ್ರಭಾವ ಮತ್ತು ಮಿಲಿಟರಿ ಮತ್ತು ಆರ್ಥಿಕ ಪ್ರಭಾವವನ್ನು ವಿಸ್ತರಿಸುವ ಚೀನಾ ಪ್ರಯತ್ನದ ಕಠಿಣ ಸಂದರ್ಭದಲ್ಲಿ ಇವರ ನೇಮಕವಾಗಿದೆ. ಭಾರತವು ವಿದೇಶಾಂಗ ನೀತಿ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಅವರ ನೇಮಕಾತಿಯಾಗಿರುವುದು ಮುಂದೆ ಅವರು ಸವಾಲುಗಳನ್ನು ಹೇಗೆ ಹಿಮ್ಮೆಟ್ಟಿಸುತ್ತಾರೆ ಎಂಬ ಕುತೂಹಲವನ್ನು ಮೂಡಿಸುತ್ತದೆ.
ಶ್ರೀಂಗ್ಲಾ ಅವರನ್ನು ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ವಿಜಯ್ ಗೋಖಲೆ ಅವರು ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಜನವರಿ 29 ರಂದು ಹೊಸ ಹುದ್ದೆಯನ್ನು ಶ್ರೀಂಗ್ಲಾ ವಹಿಸಿಕೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.