ನವದೆಹಲಿ: ಅಂತರ್ಜಲ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಅಟಲ್ ಭೂಜಲ್ ಯೋಜನೆ ಪ್ರಾರಂಭಿಸುವ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಮಂಗಳವಾರ ಪರಿಗಣಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನ ಈ ಅಂತರ್ಜಲ ಸಂರಕ್ಷಣಾ ಯೋಜನೆಯು ನೀರಿನ ಬಳಕೆದಾರರ ಸಂಘಗಳ ರಚನೆ, ಅಂತರ್ಜಲ ದತ್ತಾಂಶಗಳ ಮೇಲ್ವಿಚಾರಣೆ ಮತ್ತು ಪ್ರಸಾರ, ನೀರಿನ ಬಜೆಟ್, ಗ್ರಾಮ ಪಂಚಾಯತ್ ಮಟ್ಟದ ನೀರಿನ ಭದ್ರತಾ ಯೋಜನೆಗಳ ರಚನೆ ಮತ್ತು ಅನುಷ್ಠಾನದಂತಹ ವಿವಿಧ ಚಟುವಟಿಕೆಗಳಲ್ಲಿ ಸಮುದಾಯಗಳ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರೇರೇಪಿಸುತ್ತದೆ.
ವಾಜಪೇಯಿ ಅವರ ಜನ್ಮ ದಿನಾಚರಣೆಯಾದ ಡಿಸೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯನ್ನು ಪ್ರಾರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರಪ್ರದೇಶಗಳಲ್ಲಿ ಈ ಯೋಜನೆಯ ಅನುಷ್ಠಾನಗೊಳ್ಳಲಿದೆ. ನೀರಿನ ಅಭಾವ ಪ್ರದೇಶಗಳಲ್ಲಿ ಇದು ಅನುಷ್ಠಾನಕ್ಕೆ ಬರಲಿದೆ.
ಅಂತರ್ಜಲ ಶೋಷಣೆ ಮತ್ತು ಅವನತಿ, ಸ್ಥಾಪಿತ ಕಾನೂನು ಮತ್ತು ನಿಯಂತ್ರಕ ಸಾಧನಗಳು, ಸಾಂಸ್ಥಿಕ ಸಿದ್ಧತೆ ಮತ್ತು ಅಂತರ್ಜಲ ನಿರ್ವಹಣೆಗೆ ಸಂಬಂಧಿಸಿದ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಅನುಭವ ಸೇರಿದಂತೆ ಹಲವಾರು ಮಾನದಂಡಗಳ ಪ್ರಕಾರ ರಾಜ್ಯಗಳನ್ನು ಆಯ್ಕೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.