ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರರ ವಿರುದ್ಧ ಉತ್ತರ ಪ್ರದೇಶದ ಅಲಿಗಢದ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ವಕೀಲ ಪ್ರದೀಪ್ ಗುಪ್ತಾ ಸಲ್ಲಿಸಿರುವ ದೂರಿನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಐಎಂ) ಮುಖ್ಯಸ್ಥ ಅಸದುದ್ದೀನ್ ಒವೈಸಿ ಮತ್ತು ಪತ್ರಕರ್ತ ರವೀಶ್ ಕುಮಾರ್ ಅವರ ಹೆಸರುಗಳೂ ಸೇರಿವೆ.
ನ್ಯಾಯಾಲಯವು ದೂರನ್ನು ಸ್ವೀಕರಿಸಿದ್ದು, ಜನವರಿ 24 ರಂದು ವಿಚಾರಣೆಯನ್ನು ನಡೆಸಲಿದೆ.
ಪಾಕಿಸ್ಥಾನ, ಅಫ್ಘಾನಿಸ್ಥಾನ ಮತ್ತು ಬಾಂಗ್ಲಾದೇಶದಿಂದ ಧಾರ್ಮಿಕ ಕಿರುಕುಳದ ಕಾರಣದಿಂದಾಗಿ ಡಿಸೆಂಬರ್ 31, 2014 ರ ಮೊದಲು ಪಲಾಯನ ಮಾಡಿದ ಹಿಂದೂಗಳು, ಸಿಖ್ಖರು, ಜೈನರು, ಪಾರ್ಸಿಗಳು, ಬೌದ್ಧರು ಮತ್ತು ಕ್ರೈಸ್ತರಿಗೆ ಪೌರತ್ವ ನೀಡುವ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಈ ರಾಜಕೀಯ ನಾಯಕರು ಮತ್ತು ಪತ್ರಕರ್ತ ರವೀಶ್ ಕುಮಾರ್ ಅವರು ಪ್ರಚೋದನಾಕಾರಿ ಭಾಷಣಗಳನ್ನು ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.