ಮಂಗಳೂರು: ಆಡಳಿತದಲ್ಲಿದ್ದಾಗ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಸಂತೋಷದಿಂದ ಅನುಭವಿಸುತ್ತದೆ, ಆದರೆ ಅಧಿಕಾರದಿಂದ ಇಳಿದ ಬಳಿಕ ದಂಗೆ ಎಬ್ಬಿಸುತ್ತದೆ. ಶಾಂತಿಯಿಂದ ಇದ್ದ ಮಂಗಳೂರಿನಲ್ಲಿ ಗಲಭೆ ಸೃಷ್ಟಿಯಾಗಲು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಅವರೇ ಕಾರಣ ಎಂದು ದಕ್ಷಿಣ ಕನ್ನಡ ಸಂಸದ ಮತ್ತು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಸಿಎಎ ಕುರಿತ ಏಕದಿನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಖಾದರ್ ಅವರು ಹೇಳಿಕೆ ನೀಡಿದ ಒಂದು ದಿನಗಳ ತರುವಾಯ ಮಂಗಳೂರಿನಲ್ಲಿ ಗಲಭೆ ಸೃಷ್ಟಿಯಾಗಿದೆ. ಕಾಶ್ಮೀರ ಶೈಲಿಯಲ್ಲಿ ಗಲಭೆಕೋರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಸರ್ಕಾರದ ವಿರುದ್ಧ ಪ್ರತಿಭಟಿಸಲು ಇಂತಹವರನ್ನು ಸಮರ್ಥಿಸಿಕೊಳ್ಳುತ್ತಿದೆ” ಎಂದಿದ್ದಾರೆ.
ಅಲ್ಲದೇ ಪ್ರತಿಭಟನಾಕಾರರು ಎಲ್ಲವನ್ನೂ ಪೂರ್ವ ನಿಯೋಜಿತರಾಗಿಯೇ ಮಾಡಿದ್ದಾರೆ. ಪೆಟ್ರೋಲ್ ಬಾಂಬ್ಗಳನ್ನು ಸಿಡಿಸಿದ್ದಾರೆ, ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆಯ ಹೆಸರಿನಲ್ಲಿ ದಂಗೆಯನ್ನು ನಡೆಸಲಾಗಿದೆ. ಕಾಶ್ಮೀರದಲ್ಲೂ ಪ್ರತಿಭಟನಾಕಾರರು ಇದೇ ಮಾದರಿಯನ್ನು ಅನುಸರಿಸುತ್ತಾರೆ ಎಂದಿದ್ದಾರೆ.
ಭಾರತ ಜಾತ್ಯಾತೀತ ದೇಶ. ಹೀಗಾಗಿಯೇ ಭಾರತದ ಸಂವಿಧಾನದಲ್ಲಿ ಮುಸ್ಲಿಮರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಇದನ್ನು ಯಾವುದೇ ಹಿಂದೂಗಳು ವಿರೋಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಏನೂ ಇಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.