ನವದೆಹಲಿ: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (National Population Register) ಅನ್ನು ನವೀಕರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಜನಗಣತಿ ಆಯೋಗದ ಪ್ರಕಾರ, ದೇಶದ ಪ್ರತಿ ನಿವಾಸಿಗಳ ಸಮಗ್ರ ಗುರುತಿನ ದತ್ತಾಂಶವನ್ನು ರಚಿಸುವುದು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ ಉದ್ದೇಶವಾಗಿದೆ.
ಜನಗಣತಿ 2020ರ ಏಪ್ರಿಲ್ 1 ರಿಂದ ಆರಂಭ ಆಗಲಿದೆ.
ಕಾನೂನಿನ ಪ್ರಕಾರ, ಎನ್ಪಿಆರ್ಗೆ ‘ಸಾಮಾನ್ಯ ನಿವಾಸಿ’ ಎಂದರೆ ಕನಿಷ್ಠ ಆರು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಪ್ರದೇಶದಲ್ಲಿ ವಾಸಿಸುತ್ತಿರುವ ವ್ಯಕ್ತಿ ಅಥವಾ ಆರು ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಕಾಲ ಪ್ರದೇಶದಲ್ಲಿ ವಾಸಿಸಲು ಇಚ್ಛಿಸುತ್ತಿರುವ ವ್ಯಕ್ತಿ. ದೇಶದ ಪ್ರತಿಯೊಬ್ಬ ನಾಗರಿಕರು ಎನ್ಪಿಆರ್ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಮಧ್ಯೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿದ್ದಾರೆ, ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಸಿದ್ಧತೆಗಳಿಗೆ ಅನುಕೂಲವಾಗುವಂತೆ ಎನ್ಪಿಆರ್ ನವೀಕರಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಸಹಕರಿಸುವುದಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಹೊರತಾಗಿ, ಕೇರಳ ಮತ್ತು ಪಂಜಾಬ್ ಕೂಡ ತಮ್ಮ ರಾಜ್ಯಗಳಲ್ಲಿ ಕಾನೂನನ್ನು ಜಾರಿಗೆ ತರಲು ನಿರಾಕರಿಸಿದೆ, ಆದರೆ ಈ ವಿಷಯದಲ್ಲಿ ರಾಜ್ಯಗಳಿಗೆ ಯಾವುದೇ ಆಯ್ಕೆ ಇಲ್ಲ ಎಂದು ಕೇಂದ್ರ ಸ್ಪಷ್ಟವಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.