ಪೌರತ್ವ ತಿದ್ದುಪಡಿ ಕಾಯ್ದೆ 2019ರ ಸಾಂವಿಧಾನಿಕತೆಯನ್ನು ಸಮರ್ಥಿಸುವ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ)ಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿದೆ. ಇದರಲ್ಲಿ ಸಿಎಎ ವಿರುದ್ಧ ಸುಳ್ಳು ವದಂತಿಗಳನ್ನು ಹರಡುತ್ತಿರುವ ರಾಜಕಾರಣಿಗಳು ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ದೆಹಲಿ, ಅಹಮದಾಬಾದ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ರಾಜಸ್ಥಾನ, ಗುಜರಾತ್, ಅಸ್ಸಾಂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಘಟನೆಗಳು ಮತ್ತು 50 ಪ್ರಾಣಹಾನಿ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಾಶದ ಬಗ್ಗೆ ಪಿಐಎಲ್ ನಲ್ಲಿ ಅರ್ಜಿದಾರ ಪುನೀತ್ ಕೌರ್ ಧಂಡಾ ಉಲ್ಲೇಖಿಸಿದ್ದಾರೆ.
ದೇಶಾದ್ಯಂತ ಮುಸ್ಲಿಂ ಸಮುದಾಯದ ಜನರ ಮನಸ್ಸಿನಲ್ಲಿ ಭಯೋತ್ಪಾದನೆ ಮತ್ತು ಕಳವಳವನ್ನು ಉಂಟುಮಾಡಲು ಈ ಕಾಯ್ದೆಯ ಬಗ್ಗೆ ತಪ್ಪು ಮಾಹಿತಿಯನ್ನು ರಾಜಕೀಯ ಪಕ್ಷಗಳು ಹರಡುತ್ತಿವೆ ಎಂದು ಅವರು ದೂರಿದ್ದಾರೆ.
ಆಡಳಿತದಲ್ಲಿರುವ ಸರ್ಕಾರದ ಪ್ರಗತಿಪರ ನಿರ್ಧಾರದ ವಿರುದ್ಧ ವಿವಿಧ ರಾಜಕೀಯ ಪಕ್ಷಗಳು ನಡೆಸುತ್ತಿರುವ ಪಿತೂರಿಯ ಭಾಗವಾಗಿ ಹಿಂಸಾಚಾರವನ್ನು ಭುಗಿಲೆಬ್ಬಿಸಲಾಗಿದೆ ಎಂದು ಧಂಡಾ ವಾದಿಸಿದ್ದಾರೆ.
“ಭಯ ಮತ್ತು ಹಿಂಸೆಯ ನಕಾರಾತ್ಮಕ ವಾತಾವರಣವು ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುವುದಕ್ಕೆ ಕಾರಣವಾಗಿದೆ. ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡುವುದು ಮಾತ್ರವಲ್ಲದೆ ದೇಶಾದ್ಯಂತ ಭಾರಿ ಆರ್ಥಿಕ ನಷ್ಟವನ್ನು ಉಂಟುಮಾಡಿದೆ ಮತ್ತು ನಮ್ಮ ದೇಶಕ್ಕೆ ಕೆಟ್ಟ ಹೆಸರನ್ನು ತಂದಿದೆ” ಎಂದು ಅವರು ಪಿಐಎಲ್ ನಲ್ಲಿ ಹೇಳಿದ್ದಾರೆ. ಕ್ಯಾಂಪಸ್ಗಳಲ್ಲಿ ಇತ್ತೀಚೆಗೆ ನಡೆದ ಪೋಲಿಸ್ ಹಿಂಸಾಚಾರದ ವರದಿಗಳನ್ನು ಉಲ್ಲೇಖಿಸುತ್ತಾ, ಈ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ರಾಜಕಾರಣಿಗಳು ಗೊಂದಲಕ್ಕೆ ಕಾರಣವಾಗುವಂತೆ ಪ್ರಚೋದಿಸಲಾಗಿದೆ ಎಂದು ಧಂಡಾ ವಾದಿಸಿದ್ದಾರೆ.
“ಈ ಸಂಸ್ಥೆಗಳಿಗೆ ಸೇರಿದ ವಿದ್ಯಾರ್ಥಿಗಳನ್ನು ನಮ್ಮ ದೇಶದ ಅಭಿವೃದ್ಧಿಗೆ ವಿರುದ್ಧವಾಗಿರುವ ವಿವಿಧ ರಾಜಕೀಯ ಪಕ್ಷಗಳು ಮತ್ತು ನಗರ ನಕ್ಸಲರು ಹಿಂಸಾಚಾರ ಮತ್ತು ಭಾರತ ವಿರೋಧಿ ಚಟುವಟಿಕೆಗಳಿಗೆ ಪ್ರಚೋದಿಸುತ್ತಿದ್ದಾರೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ವಿವಿಧ ರಾಜಕೀಯ ಪಕ್ಷಗಳು ಎಷ್ಟರ ಮಟ್ಟಿಗೆ ಪ್ರಚೋದಿಸಿದೆಯೆಂದರೆ, ಪೂರ್ಣ ಪ್ರಮಾಣದ ಹೋರಾಟದ ನಂತರವೂ ದೆಹಲಿ ನಗರವು ಎರಡು ದಿನಗಳ ಕಾಲ ಸ್ಥಗಿತಗೊಂಡಿತ್ತು. ಉದ್ವಿಗ್ನತೆಯಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಮತ್ತು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಮತ್ತು ಕೋಟ್ಯಂತರ ಆಸ್ತಿಪಾಸ್ತಿ ನಷ್ಟವಾಗಿದೆ” ಎಂದಿದ್ದಾರೆ.
ಇನ್ನೊಂದೆಡೆ, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟಿಸಲು ಅವರಿಗೆ ಯಾವುದೇ ಕಾರಣವಿಲ್ಲ ಎಂದು ಧಂಡಾ ಅರ್ಜಿಯಲ್ಲಿ ಒತ್ತಿ ಹೇಳಿದ್ದಾರೆ.
“ವಾಸ್ತವ ಸಂಗತಿಯೆಂದರೆ, ಪೌರತ್ವ ತಿದ್ದುಪಡಿ ಕಾಯ್ದೆಗೂ ಇಲ್ಲಿ ಹುಟ್ಟಿದ ಅಥವಾ ಕಾನೂನು ವಿಧಾನದಿಂದ ಈ ದೇಶದ ಪ್ರಜೆಗಳಾಗಿರುವ ನಮ್ಮ ದೇಶದ ಮುಸ್ಲಿಂ ಸಹೋದರ ಸಹೋದರಿಯರಿಗೂ ಯಾವುದೇ ಸಂಬಂಧವಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ 2019 ರಲ್ಲಿ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಂತಹ ದೇಶಗಳಲ್ಲಿನ ಧಾರ್ಮಿಕ ದೌರ್ಜನ್ಯವನ್ನು ಅನುಭವಿಸುತ್ತಿರುವ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರನ್ನು ಕೊಲ್ಲಲಾಗುತ್ತಿದೆ, ಅತ್ಯಾಚಾರ ಮಾಡಲಾಗುತ್ತಿದೆ, ತೊಂದರೆಗೊಳಪಡಿಸಲಾಗುತ್ತಿದೆ, ಇಸ್ಲಾಂಗೆ ಮತಾಂತರ ಮಾಡಲಾಗುತ್ತಿದೆ” ಎಂದಿದ್ದಾರೆ.
ಈ ಬಗೆಗಿನ ಕಳವಳಗಳನ್ನು ಗಮನದಲ್ಲಿಟ್ಟುಕೊಂಡು, ಅರ್ಜಿದಾರರು ಸುಪ್ರೀಂ ಕೋರ್ಟ್ನ ಮುಂದೆ ಮಾಡಿದ ವಿನಂತಿಗಳು:
🔸 ಪೌರತ್ವ ತಿದ್ದುಪಡಿ ಕಾಯ್ದೆ, 2019 ಅನ್ನು ಸಾಂವಿಧಾನಿಕ ಎಂದು ಘೋಷಿಸಿ
🔸 ಆಯಾ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ನಿರ್ದೇಶಿಸಿ
🔸 ಪೌರತ್ವ ತಿದ್ದುಪಡಿ ಕಾಯ್ದೆ, 2019 ಕ್ಕೆ ಸಂಬಂಧಿಸಿದಂತೆ ಸರ್ಕಾರವು ಪತ್ರಿಕೆಗಳು, ಎಲೆಕ್ಟ್ರಾನಿಕ್ ಮಾಧ್ಯಮಗಳು ಮತ್ತು ಇತರ ಜಾಹೀರಾತು ವಿಧಾನಗಳ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡುವಂತೆ ನಿರ್ದೇಶಿಸಿ ಮತ್ತು ಅದು ಭಾರತದ ಸಂವಿಧಾನದ ಮನೋಭಾವಕ್ಕೆ ವಿರುದ್ಧವಲ್ಲ ಮತ್ತು ಯಾವುದೇ ಅರ್ಥದಲ್ಲಿ ಭಾರತದ ಯಾವುದೇ ನಾಗರಿಕರ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿ.
🔸 ದೇಶದಲ್ಲಿ ಸುಳ್ಳು ವದಂತಿಗಳು ಮತ್ತು ಹಿಂಸಾಚಾರಗಳನ್ನು ಹರಡುವ ರಾಜಕೀಯ ಪಕ್ಷಗಳನ್ನು ಗುರುತಿಸಲು ಮತ್ತು ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿ
🔸 ಸುಳ್ಳು ಮಾಹಿತಿ ಮತ್ತು ವದಂತಿಗಳನ್ನು ಹರಡುತ್ತಿರುವ ಪತ್ರಿಕೆ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ನೇರ ಕಠಿಣ ಕಾನೂನು ಕ್ರಮ ಕೈಗೊಳ್ಳಿ
🔸 ಶಾಂತಿ ಮತ್ತು ಸಾಮರಸ್ಯಕ್ಕೆ ಭಂಗ ತರುವವರ ವಿರುದ್ಧ ನೇರ ಕಾನೂನು ಕ್ರಮ ಜರುಗಿಸಿ
ಈ ಅರ್ಜಿಯನ್ನು ವಕೀಲ ವಿನೀತ್ ಧಂಡಾ ಅವರು ರೂಪಿಸಿದ್ದಾರೆ ಮತ್ತು ವಕೀಲ ಜೆ.ಪಿ.ಧಂಡಾ ಅವರು ಸಲ್ಲಿಸಿದ್ದಾರೆ.
2019 ರ ಪೌರತ್ವ ತಿದ್ದುಪಡಿ ಕಾಯ್ದೆ ಸಾಂವಿಧಾನಿಕವಾಗಿ ಮಾನ್ಯವಾಗಿದೆಯೇ ಎಂಬ ವಿಷಯವನ್ನು ಸುಪ್ರೀಂ ಕೋರ್ಟ್ ಈಗಾಗಲೇ ಪರಿಶೀಲನೆಗಳನ್ನು ನಡೆಸುತ್ತಿದೆ. ಈ ತಿಂಗಳ ಆರಂಭದಲ್ಲಿ, ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರ ನ್ಯಾಯಪೀಠವು ಕಾಯ್ದೆಗೆ ಸಂಬಂಧಿಸಿದಂತೆ 60 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.