ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ನೆಪದಲ್ಲಿ ಮಂಗಳೂರಿನಲ್ಲಿ ಗಲಭೆ ಸೃಷ್ಟಿಸಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಳ್ಳುವ ನಿರ್ಧಾರ ತೆಗೆದುಕೊಂಡಿದೆ. ಪೊಲೀಸರ ಗೋಲಿಬಾರ್ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಘೋಷಿಸಲಾಗಿದ್ದ ಪರಿಹಾರವನ್ನು ಹಿಂಪಡೆದುಕೊಂಡಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, “ಗೋಲಿಬಾರ್ನಲ್ಲಿ ಮೃತಪಟ್ಟವರು ಅಪರಾಧಿಗಳು ಎಂಬ ಶಂಕೆ ಇರುವುದರಿಂದ ತನಿಖೆ ಮುಗಿಯುವವರೆಗೂ ಅವರಿಗೆ ಪರಿಹಾರವನ್ನು ನೀಡುವುದಿಲ್ಲ. ತನಿಖೆ ಮುಗಿದ ಮೇಲೆ ಈ ಬಗ್ಗೆ ಚಿಂತನೆ ಮಾಡುತ್ತೇವೆ. ಅಪರಾಧಿಗಳು ಎಂದು ಸಾಬೀತಾದವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ” ಎಂದಿದ್ದಾರೆ.
ಗೋಲಿಬಾರ್ ಆದ ಬಳಿಕ ಯಡಿಯೂರಪ್ಪನವರು ಸರ್ಕಾರದ ವತಿಯಿಂದ ಮೃತಪಟ್ಟವರಿಗೆ 10 ಲಕ್ಷ ರೂಪಾಯಿಗಳ ಪರಿಹಾರ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದರು. ಇದಕ್ಕೆ ಭಾರೀ ವಿರೋಧಗಳೂ ವ್ಯಕ್ತವಾಗಿತ್ತು. ಇದೀಗ ತನಿಖೆ ಮುಗಿಯುವವರೆಗೂ ಪರಿಹಾರವಿಲ್ಲ ಎಂದು ಹೇಳುವ ಮೂಲಕ ದೃಢ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿ, “ಮಂಗಳೂರಿನಲ್ಲಿ ಪೊಲೀಸರು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಏನು ಮಾಡಬೇಕಿತ್ತೋ ಅದನ್ನೇ ಮಾಡಿದ್ದಾರೆ. ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಬೇಕು ಎಂಬ ಒತ್ತಾಯದ ಬಗ್ಗೆ ಈಗ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ತನಿಖೆಯ ಮೇಲೆಯೇ ಈ ಬಗ್ಗೆ ನಿರ್ಧರಿಸುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.