ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರು ಲಕ್ನೋದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಂಚಿನ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿದರು. ಅಟಲ್ ಅವರ 95ನೇ ಜನ್ಮ ದಿನಾಚರಣೆಯ ಪ್ರಯುಕ್ತ ಇಂದು ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಲೋಕ ಭವನದಲ್ಲಿ ದಿವಂಗತ ಪ್ರಧಾನಿ ಅವರಿಗೆ ಪ್ರಧಾನಿ ಮೋದಿ ಗೌರವ ಸಲ್ಲಿಸಿದರು.
ಅಲ್ಲದೇ, ಲಕ್ನೋದಲ್ಲಿ ಅಟಲ್ ಬಿಹಾರಿ ಮೆಡಿಕಲ್ ಯೂನಿವರ್ಸಿಟಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಈ ಯೂನಿವರ್ಸಿಟಿಯನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ 50 ಎಕರೆ ಭೂಮಿಯನ್ನು ಮಂಜೂರು ಮಾಡಿದೆ.
“ನಾನು ಯುಪಿಯ ಯುವಕರನ್ನು ಮತ್ತು ಪ್ರತಿಯೊಬ್ಬ ವ್ಯಕ್ತಿಯನ್ನು ವಿನಂತಿಸಿಕೊಳ್ಳುವುದು ಏನೆಂದರೆ, “ಈಗ ನಾವು ಸ್ವಾತಂತ್ರ್ಯದ 75 ವರ್ಷಗಳತ್ತ ಸಾಗುತ್ತಿದ್ದೇವೆ, ನಮ್ಮ ಜವಾಬ್ದಾರಿಗಳನ್ನು ನಾವು ನೋಡಬೇಕಾದ ಸಮಯ ಬಂದಿದೆ. ಇತ್ತೀಚಿನ ದಿನಗಳಲ್ಲಿ ಹಿಂಸಾತ್ಮಕವಾಗಿ ಪ್ರತಿಭಟಿಸಿದ ಮತ್ತು ಆಸ್ತಿಯನ್ನು ಧ್ವಂಸಗೊಳಿಸಿದ ಪ್ರತಿಯೊಬ್ಬರೂ ಸ್ವತಃ ತಮ್ಮನ್ನು ತಾವು ಕೇಳಿಕೊಳ್ಳಬೇಕು, ತಾವು ಅನುಸರಿಸಿದ್ದು ಸರಿಯಾದ ಮಾರ್ಗವೇ?” ಎಂದು.
ಉತ್ತಮ ರಸ್ತೆಗಳು, ಸೌಲಭ್ಯಗಳು ಮತ್ತು ಸ್ವಚ್ಛವಾದ ಒಳಚರಂಡಿ ವ್ಯವಸ್ಥೆಯು ನಾಗರಿಕರ ಹಕ್ಕಾಗಿದೆ, ಅವುಗಳನ್ನು ಸರಿಯಾಗಿ ನಿರ್ವಹಿಸುವುದು ಅವರ ಜವಾಬ್ದಾರಿಯಾಗಿದೆ ಎಂದು ನಾನು ಈ ಪ್ರತಿಭಟನಾಕಾರರಿಗೆ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರವು 2014ರಿಂದ ವಾಜಪೇಯಿ ಅವರ ಜನ್ಮದಿನವನ್ನು ‘ಉತ್ತಮ ಆಡಳಿತ ದಿನ’ವನ್ನಾಗಿ ಆಚರಣೆ ಮಾಡುತ್ತಿದೆ. ಈ ನಿಮಿತ್ತ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.