ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಹೆಸರಿನಲ್ಲಿ ದೆಹಲಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪಾಠ ಕಲಿಸಬೇಕೆಂದು ಜನರಲ್ಲಿ ಮನವಿ ಮಾಡಿಕೊಂಡರು.
“ಪೌರತ್ವ ತಿದ್ದುಪಡಿ ಮಸೂದೆಯ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆದಾಗ, ಯಾರೂ ಏನನ್ನೂ ಹೇಳಲು ಸಿದ್ಧರಿರಲಿಲ್ಲ, ಅಮೇಲೆ ಕಾಯ್ದೆಯ ಬಗ್ಗೆ ಸುಳ್ಳು ಹರಡಲು ಪ್ರಾರಂಭಿಸಿದರು, ಇದರಿಂದಾಗಿ ದೆಹಲಿಯಲ್ಲಿ ಅಶಾಂತಿ ಉಂಟಾಯಿತು. ಕಾಂಗ್ರೆಸ್ ಮತ್ತು ತುಕ್ಡೆ-ತುಕ್ಡೆ ಗ್ಯಾಂಗ್ ದೆಹಲಿಯಲ್ಲಿ ಅಶಾಂತಿಯನ್ನು ಸೃಷ್ಟಿಸಿದೆ. ಅವರನ್ನು ಶಿಕ್ಷಿಸುವ ಸಮಯ ಬಂದಿದೆ. ದೆಹಲಿಯ ಜನರು ಅವರನ್ನು ಶಿಕ್ಷಿಸಬೇಕು ” ಎಂದು ಶಾ ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ ಅವರು, ಆಮ್ ಆದ್ಮಿ ಪಕ್ಷವು ತನ್ನ ಐದು ವರ್ಷಗಳ ಅವಧಿಯಲ್ಲಿ ಏನನ್ನೂ ಸಾಧಿಸಿಲ್ಲ ಮತ್ತು ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅವರನ್ನು ಸೋಲಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.
ಕೇಜ್ರಿವಾಲ್ ತಮ್ಮ ಚುನಾವಣಾ ಭರವಸೆಗಳನ್ನು ಈಡೇರಿಸದೆ ಸುಳ್ಳು ಜಾಹೀರಾತುಗಳಿಂದ ಸಾರ್ವಜನಿಕರನ್ನು ಮರುಳು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. “ಕೇಜ್ರಿವಾಲ್ ಸರ್ಕಾರ ಕಳೆದ 57 ತಿಂಗಳಲ್ಲಿ ಯಾವ ಕಾರ್ಯವನ್ನೂ ಮಾಡಿಲ್ಲ, ಆದರೆ ಅವಧಿಯ ಕೊನೆಯ ಮೂರು ತಿಂಗಳಲ್ಲಿ ಅವರು ತಮ್ಮ ಸಾಧನೆಗಳನ್ನು ಜಾಹೀರಾತು ಮಾಡುತ್ತಿದ್ದಾರೆ ಮತ್ತು ಎಲ್ಲದಕ್ಕೂ ತಾವೇ ಕಾರಣ ಎಂಬಂತೆ ವರ್ತಿಸುತ್ತಿದ್ದಾರೆ” ಎಂದಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವು ವಿಜಯಶಾಲಿಯಾಗಲಿದೆ ಮತ್ತು ಎಎಪಿಯನ್ನು ಸೋಲಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.