ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿ ವಿರುದ್ಧದ ಪ್ರತಿಭಟನೆಗಳು ಮುಂದುವರೆದಿರುವಂತೆಯೇ, ಉತ್ತರಪ್ರದೇಶ ಸರ್ಕಾರ ಪ್ರತಿಭಟನೆಯ ಸಂದರ್ಭ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿದ್ದ ಹಾನಿಯನ್ನು ಸರಿಪಡಿಸುವಂತೆ 498 ಜನರಿಗೆ ಸೂಚನೆಯನ್ನು ನೀಡಿದೆ.
ಸುತ್ತೋಲೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಹಾನಿ ಮಾಡಿದವರನ್ನು ಸಮಾಜ ಘಾತುಕ ಶಕ್ತಿಗಳು ಎಂದು ರಾಜ್ಯ ಸರ್ಕಾರ ಗುರುತಿಸಿದೆ. ಹೀಗೆ ಗುರುತಿಸಲಾದ “ಸಮಾಜ ಘಾತುಕರ” ಆಸ್ತಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗುತ್ತಿದೆ ಮತ್ತು ಆಯಾ ಜಿಲ್ಲಾ ನ್ಯಾಯಾಧೀಶರಿಗೆ ಈ ಬಗ್ಗೆ ಮಾಹಿತಿಯನ್ನು ನೀಡಿದೆ.
ಲಕ್ನೋದ ಕನಿಷ್ಠ 82, ಮೀರತ್ನ 148, ಸಂಭಾಲ್ನ 26, ರಾಂಪುರದ 79, ಫಿರೋಜಾಬಾದ್ನ 13, ಕಾನ್ಪುರದ 50, ಮುಜಾಫರ್ನಗರದ 73, ಮಾವೋದ 8 ಮತ್ತು ಬುಲಂದ್ಶಹರ್ನ 19 ಜನರನ್ನು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರು ಎಂದು ಗುರುತಿಸಲಾಗಿದೆ. ಸಿಎಎ ವಿರುದ್ಧ ಯುಪಿಯಲ್ಲಿ ಡಿಸೆಂಬರ್ 10 ರಿಂದ 24 ರವರೆಗೆ ಹಿಂಸಾತ್ಮಕ ಪ್ರತಿಭಟನೆ ನಡೆದಿತ್ತು.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೆಚ್ಚು ಹಿಂಸಾತ್ಮಕ ಪ್ರತಿಭಟನೆ ನಡೆಸುವ ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ಉತ್ತರ ಪ್ರದೇಶ ಸರ್ಕಾರ ಗುರುವಾರ ಹಲವಾರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇಡೀ ರಾಜ್ಯದಲ್ಲಿ ಸರ್ಕಾರ ಸೆಕ್ಷನ್ 144 ಅನ್ನು ವಿಧಿಸಿದೆ.
ಮಾಹಿತಿಯ ಪ್ರಕಾರ, 5,558 ಜನರ ವಿರುದ್ಧ ನಿರ್ಬಂಧಗಳನ್ನು ವಿಧಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಒಟ್ಟು 81 ಎಫ್ಐಆರ್ ದಾಖಲಿಸಲಾಗಿದೆ ಮತ್ತು 120 ಆರೋಪಿಗಳನ್ನು ಬಂಧಿಸಲಾಗಿದೆ. 7,513 ಟ್ವಿಟರ್ ಪೋಸ್ಟ್ಗಳು, 9,076 ಫೇಸ್ಬುಕ್ ಪೋಸ್ಟ್ಗಳು ಮತ್ತು 172 ಯೂಟ್ಯೂಬ್ ವೀಡಿಯೊಗಳ ವಿರುದ್ಧ ಕ್ರಮಗಳನ್ನು ಜರುಗಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.