ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಗೆ ಬೆಂಬಲವಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿಯಾನವನ್ನು ಪ್ರಾರಂಭಿಸಿದರು.
“#IndiaSupportsCAA. ಏಕೆಂದರೆ ಸಿಎಎ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವುದರ ಬಗ್ಗೆ ಇದೆ ಮತ್ತು ಯಾರ ಪೌರತ್ವವನ್ನು ಇದು ಕಸಿದುಕೊಳ್ಳುವುದಿಲ್ಲ” ಎಂದು ಪ್ರಧಾನ ಮಂತ್ರಿ ಮೋದಿ ಟ್ವೀಟ್ ಮಾಡಿದ್ದಾರೆ.
“ವಿಷಯ, ಗ್ರಾಫಿಕ್ಸ್, ವೀಡಿಯೊಗಳು ಮತ್ತು ಹೆಚ್ಚಿನವುಗಳಿಗಾಗಿ ನಮೋ ಅಪ್ಲಿಕೇಶನ್ನಲ್ಲಿನ ಸ್ವಯಂಸೇವಕ ಮಾಡ್ಯೂಲ್ನ ನಿಮ್ಮ ಧ್ವನಿ ವಿಭಾಗದಲ್ಲಿ ಈ ಹ್ಯಾಶ್ಟ್ಯಾಗ್ ಪರಿಶೀಲಿಸಿ. ಸಿಎಎಗೆ ನಿಮ್ಮ ಬೆಂಬಲವನ್ನು ಹಂಚಿಕೊಳ್ಳಿ ಮತ್ತು ತೋರಿಸಿ ..” ಎಂದು ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಅಲ್ಲದೆ ಸದ್ಗುರು ಜಗ್ಗಿ ವಾಸುದೇವ್ ಅವರು ಮಾತನಾಡಿದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಾದ ವೀಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
Do hear this lucid explanation of aspects relating to CAA and more by @SadhguruJV.
He provides historical context, brilliantly highlights our culture of brotherhood. He also calls out the misinformation by vested interest groups. #IndiaSupportsCAA https://t.co/97CW4EQZ7Z
— Narendra Modi (@narendramodi) December 30, 2019
ಅಪ್ಘಾನಿಸ್ಥಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ಸಿಖ್, ಹಿಂದೂ, ಬೌದ್ಧ, ಜೈನ್, ಕ್ರಿಶ್ಚಿಯನ್ ಸಮುದಾಯದ ಅಲ್ಪಸಂಖ್ಯಾತ ನಿರಾಶ್ರಿತರಿಗೆ ಭಾರತದ ಪೌರತ್ವವನ್ನು ನೀಡುವ ಕಾಯ್ದೆ ಇದಾಗಿದೆ. 2014ರ ಡಿಸೆಂಬರ್ 31ರ ಒಳಗೆ ಭಾರತಕ್ಕೆ ಬಂದವರಿಗೆ ಮಾತ್ರ ಪೌರತ್ವ ಸಿಗಲಿದೆ.
ಈಗಾಗಲೇ ಹಲವಾರು ಬಾರಿ ಪ್ರಧಾನಿ ಮೋದಿಯವರು ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನವನ್ನು ಅವರು ಆರಂಭಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.