ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ದೇಶದ ಒಟ್ಟು ಮರ ಮತ್ತು ಅರಣ್ಯ ವ್ಯಾಪ್ತಿಯು 5,188 ಚದರ ಕಿಲೋಮೀಟರ್ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸೋಮವಾರ ಬಿಡುಗಡೆ ಮಾಡಿದ ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ ರಿಪೋರ್ಟ್ 2019 ತಿಳಿಸಿದೆ.
2017ರ ಕೊನೆಯ ಮೌಲ್ಯಮಾಪನಕ್ಕೆ ಹೋಲಿಸಿದರೆ ಈ ಬಾರಿ ದೇಶದ ಕಾರ್ಬನ್ ಸ್ಟಾಕ್ಗಳಲ್ಲಿ 42.6 ಮಿಲಿಯನ್ ಟನ್ ಹೆಚ್ಚಳವಾಗಿದೆ ಎಂದು ವರದಿಯನ್ನು ಬಿಡುಗಡೆ ಮಾಡುವಾಗ ಜಾವ್ಡೇಕರ್ ಹೇಳಿದ್ದಾರೆ.
“ಈ ವರದಿಯು ನಮ್ಮ ಪ್ಯಾರಿಸ್ ಒಪ್ಪಂದದ ಗುರಿಗಳನ್ನು ಸಾಧಿಸುವ ಹಾದಿಯಲ್ಲಿ ನಾವಿದ್ದೇವೆ ಎಂಬ ವಿಶ್ವಾಸವನ್ನು ನೀಡುತ್ತದೆ” ಎಂದು ಅವರು ಹೇಳಿದರು.
ಪ್ರಸ್ತುತ ಮೌಲ್ಯಮಾಪನವು ಈಶಾನ್ಯ ಭಾರತ ಪ್ರದೇಶದಲ್ಲಿ 765 ಚದರ ಕಿ.ಮೀ (ಶೇಕಡಾ 0.45) ವರೆಗಿನ ಅರಣ್ಯ ವ್ಯಾಪ್ತಿಯ ಇಳಿಕೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಅಸ್ಸಾಂ ಮತ್ತು ತ್ರಿಪುರವನ್ನು ಹೊರತುಪಡಿಸಿ, ಈ ಪ್ರದೇಶದ ಎಲ್ಲಾ ರಾಜ್ಯಗಳು ಅರಣ್ಯ ವ್ಯಾಪ್ತಿಯಲ್ಲಿ ಇಳಿಕೆಯನ್ನು ತೋರಿಸುತ್ತಿದೆ.
ಹಿಂದಿನ ಮೌಲ್ಯಮಾಪನಕ್ಕೆ ಹೋಲಿಸಿದರೆ ದೇಶದಲ್ಲಿ ಮ್ಯಾಂಗ್ರೋವ್ ವ್ಯಾಪ್ತಿಯು 54 ಚದರ ಕಿ.ಮೀ (ಶೇಕಡಾ 1.10) ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ಕಳೆದ 2 ವರ್ಷಗಳಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಅರಣ್ಯ ವ್ಯಾಪ್ತಿ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.