ನವದೆಹಲಿ: ಜನರಲ್ ಮನೋಜ್ ಮುಕುಂದ್ ನರವಾಣೆ ಅವರು ಮಂಗಳವಾರ (ಭಾರತೀಯ ಸೇನೆಯ 28 ನೇ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಜನರಲ್ ಬಿಪಿನ್ ರಾವತ್ ಅವರು ಮೂರು ವರ್ಷಗಳ ಕಾಲ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹಿನ್ನಲೆಯಲ್ಲಿ ನರವಾಣೆ ಅವರ ನೇಮಕವಾಗಿದೆ. ಜನರಲ್ ರಾವತ್ ಅವರನ್ನು ಸೋಮವಾರ ಭಾರತದ ಮೊದಲ ಸೇನಾ ಮಹಾದಂಡ ನಾಯಕನ್ನಾಗಿ ನೇಮಿಸಲಾಗಿದೆ.
ಸೇನಾ ಮುಖ್ಯಸ್ಥರಾಗಿ ಹೊಸದಾಗಿ ಅಧಿಕಾರ ವಹಿಸಿಕೊಂಡ ಜನರಲ್ ನರವಾಣೆ, ವಾಯುಪಡೆಯ ಮುಖ್ಯಸ್ಥ ಆರ್. ಕೆ. ಎಸ್ ಭದೌರಿಯಾ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮೂವರು ಕೂಡ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ 56 ನೇ ಕೋರ್ಸ್ನಿಂದ ಬಂದವರು.
ಸೇನೆಯಲ್ಲಿ 37 ವರ್ಷ ಸೇವೆಯ ಅನುಭವ ಹೊಂದಿರುವ ಲೆ.ಜ.ಮನೋಜ್ ತಮ್ಮ ಸೇವಾವಧಿಯಲ್ಲಿ ಚೀನಾ ಗಡಿ, ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಮಹತ್ವದ ಹುದ್ದೆಯನ್ನು ನಿರ್ವಹಿಸಿದ್ದಾರೆ. ಇವರು ಸಲ್ಲಿಸಿದ ಸೇವೆಗಳಿಗಾಗಿ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಠ ಸೇವಾ ಪದಕಗಳು ದೊರೆತಿವೆ.
ನರವಾಣೆಯವರು ಸೇನಾಯ ಉಪ ಮುಖ್ಯಸ್ಥರಾಗುವುದಕ್ಕೂ ಮುನ್ನ ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯಿರುವ ಭೂಸೇನೆಯ ಪೂರ್ವ ಕಮಾಂಡ್’ನ ಕಮಾಂಡರ್ ಆಗಿದ್ದರು. ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನುಸುಳುಕೋರರ ವಿರುದ್ಧ ಕಾರ್ಯಾಚರಣೆಗಳ ತಂತ್ರದ ರೂವಾರಿಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.