ಅಹಮದಾಬಾದ್ : ಗುಜರಾತಿನಲ್ಲಿ ಭಾನುವಾರ ನಡೆದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು 30 ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಸ್ಥಾನಗಳ ಪೈಕಿ 26 ಸ್ಥಾನಗಳನ್ನು ಗೆದ್ದಿದೆ ಮತ್ತು ಇತರ ಮೂರು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ.
ಪ್ರತಿಪಕ್ಷ ಕಾಂಗ್ರೆಸ್ ಕೇವಲ ಮೂರು ಸ್ಥಾನಗಳನ್ನು ಗೆದ್ದರೆ, ಇನ್ನೊಂದನ್ನು ಸ್ವತಂತ್ರ ಅಭ್ಯರ್ಥಿ ಗೆದ್ದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಚುನಾವಣಾ ಆಯೋಗ ಮಂಗಳವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, “ಒಟ್ಟು 33 ಸ್ಥಾನಗಳಲ್ಲಿ, ಮೂರು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಗೆದ್ದಿದ್ದಾರೆ. 30 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಅದರಲ್ಲಿ ಬಿಜೆಪಿ 26 ಸ್ಥಾನಗಳು, ಕಾಂಗ್ರೆಸ್ ಮೂರು ಸ್ಥಾನಗಳು ಮತ್ತು ಒಂದು ಸ್ಥಾನ ಸ್ವತಂತ್ರ ಅಭ್ಯರ್ಥಿ ಗೆದ್ದುಕೊಂಡಿದ್ದಾರೆ” ಎಂದಿದ್ದಾರೆ.
ಚುನಾವಣೆ ನಡೆದ 30 ಸ್ಥಾನಗಳ ಪೈಕಿ ಮೂರು ಸ್ಥಾನಗಳು ಜಿಲ್ಲಾ ಪಂಚಾಯತ್ ಸ್ಥಾನಗಳಾಗಿವೆ. ಇದರಲ್ಲಿ ಬಿಜೆಪಿಯು ಒಂದು ಸ್ಥಾನ, ಕಾಂಗ್ರೆಸ್ ಎರಡು ಸ್ಥಾನಗಳಲ್ಲಿ ಜಯ ಸಾಧಿಸಿವೆ.
ಉಳಿದ 27 ಸ್ಥಾನಗಳು ತಾಲ್ಲೂಕು ಪಂಚಾಯಿತಿಗಳಾಗಿದ್ದು, ಇದರಲ್ಲಿ ಬಿಜೆಪಿ 25, ಕಾಂಗ್ರೆಸ್ 1 ಮತ್ತು 1 ಸ್ವತಂತ್ರ ಅಭ್ಯರ್ಥಿ ಎಂದು ಚುನಾವಣಾ ಆಯೋಗ ತಿಳಿಸಿದೆ.
ವಿಜಯದ ನಂತರ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು 33 ಸ್ಥಾನಗಳ ಪೈಕಿ 29 ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದಕ್ಕಾಗಿ ಗುಜರಾತ್ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. “ಈ ವಿಜಯವು ಮುಂಬರುವ ಜಿಲ್ಲೆ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಿಗೆ ಪೂರ್ವಸೂಚಕವಾಗಿದೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.