ನವದೆಹಲಿ: ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ ಸೂಚ್ಯಂಕ (ಸಿ.ಸಿ.ಪಿ.ಐ)ದಲ್ಲಿ ಭಾರತ ಇದೇ ಮೊದಲ ಬಾರಿಗೆ ಟಾಪ್ ಹತ್ತು ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಮಹತ್ವದ ಸುಧಾರಣಾ ಕ್ರಮಗಳಿಂದಾಗಿ ಇದು ಸಾಧ್ಯವಾಗಿದೆ. ನವೀಕರಿಸಬಹುದಾದ ಇಂಧನಗಳ ಪಾಲನ್ನು 2022 ರ ವೇಳೆಗೆ 175 ಗಿಗಾವಾಟ್ಗೆ ಹೆಚ್ಚಿಸಲು ಮತ್ತು ಮಂದೆ ಅದನ್ನು 450 ಜಿವ್ಯಾಟ್ಗೆ ತೆಗೆದುಕೊಂಡು ಹೋಗುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ವಾಯುಮಾಲಿನ್ಯವು ಇಂದಿನ ಜಾಗತಿಕ ಪರಿಸರ ಸವಾಲುಗಳಲ್ಲಿ ಒಂದಾಗಿದೆ. ಹೆಚ್ಚುತ್ತಿರುವ ವಾಯುಮಾಲಿನ್ಯ ಸಮಸ್ಯೆಯನ್ನು ಸಮಗ್ರ ರೀತಿಯಲ್ಲಿ ನಿಭಾಯಿಸಲು ರಾಷ್ಟ್ರೀಯ ಕ್ಲೀನ್ ಏರ್ ಪ್ರೋಗ್ರಾಂ ಅನ್ನು ಕಳೆದ ವರ್ಷ ದೇಶದಾದ್ಯಂತ ಅನುಷ್ಠಾನಕ್ಕೆ ತರಲಾಯಿತು. ಅರಣ್ಯ ವ್ಯಾಪ್ತಿ ನಿರಂತರವಾಗಿ ಹೆಚ್ಚುತ್ತಿರುವ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಸೇರಿದೆ. ಒಟ್ಟು ಅರಣ್ಯ ಮತ್ತು ಮರದ ವ್ಯಾಪ್ತಿಯು ದೇಶದ ಒಟ್ಟು ಭೌಗೋಳಿಕ ಪ್ರದೇಶದ ಶೇಕಡಾ 24 ಕ್ಕಿಂತ ಹೆಚ್ಚಾಗಿದೆ ಎಂಬುದು ಮಹತ್ವದ ಬೆಳವಣಿಗೆಯಾಗಿದೆ.
ಹುಲಿಗಳನ್ನು ಸಂರಕ್ಷಿಸಲು ಸರ್ಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಇತ್ತೀಚಿನ ಹುಲಿ ಗಣತಿ ದತ್ತಾಂಶ -2018 ರ ಪ್ರಕಾರ, ಭಾರತದ ಒಟ್ಟು ಹುಲಿಗಳು ಸುಮಾರು ಮೂರು ಸಾವಿರಕ್ಕೆ ಏರಿದೆ. ಅರಣ್ಯ ಬೆಳವಣಿಗೆಯನ್ನು ಉತ್ತೇಜಿಸಲು ಮತ್ತು ದೇಶದ ಹಸಿರು ಉದ್ದೇಶಗಳನ್ನು ಸಾಧಿಸಲು ಪ್ರಮುಖ ಉತ್ತೇಜನವನ್ನು ಕೇಂದ್ರ ನೀಡುತ್ತಿದೆ. ಸರ್ಕಾರವು ಕಳೆದ ವರ್ಷ ಆಗಸ್ಟ್ನಲ್ಲಿ ವಿವಿಧ ರಾಜ್ಯಗಳಿಗೆ ಪರಿಹಾರದ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರದ 47 ಸಾವಿರ ಕೋಟಿ ರೂಪಾಯಿಗಳನ್ನು ವಿವಿಧ ರಾಜ್ಯಗಳಿಗೆ ಹಸ್ತಾಂತರಿಸಿತು.
ಈ ಎಲ್ಲಾ ಪ್ರಯತ್ನಗಳ ಫಲವಾಗಿ ಕೇಂದ್ರ ಸರ್ಕಾರ ಹವಾಮಾನ ಬದಲಾವಣೆಯ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಟಾಪ್ 10 ಸ್ಥಾನಗಳನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.