ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ 2019ರ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿರುವ ದಾರಿತಪ್ಪಿಸುವ ಅಭಿಯಾನಕ್ಕೆ ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿದೆ. ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು ರಾಜಸ್ಥಾನದ ಜೋಧಪುರದಲ್ಲಿ ಸಿಎಎ ಪರವಾದ ಅಭಿಯಾನಕ್ಕೆ ಚಾಲನೆಯನ್ನು ನೀಡುತ್ತಿದ್ದಾರೆ.
ದೇಶದಾದ್ಯಂತ ಪ್ರತಿಭಟನೆಯನ್ನು ಹುಟ್ಟುಹಾಕಿದ ಪೌರತ್ವ (ತಿದ್ದುಪಡಿ) ಕಾಯ್ದೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವನ್ನು ಮೂಡಿಸಲು ಮತ್ತು ಜನರ ಕಳವಳಗಳನ್ನು ಪರಿಹರಿಸಲು ಪಕ್ಷದ ಹೊಸ ಪ್ರಯತ್ನದ ಭಾಗವಾಗಿ ಗೃಹ ಸಚಿವರು ಜೋಧಪುರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಿಎಎಗೆ ತಮ್ಮ ಬೆಂಬಲವನ್ನು ನೀಡಲು ಜನರು ಮಿಸ್ಡ್ ಕರೆಗಳನ್ನು ನೀಡುವಂತಹ ಟೋಲ್-ಫ್ರೀ ಸಂಖ್ಯೆಯನ್ನು ಸಹ ಪ್ರಾರಂಭಿಸಲಿದ್ದಾರೆ.
ಅಂತೆಯೇ, ಬಿಜೆಪಿಯ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಶುಕ್ರವಾರ ಗೋವಾದಲ್ಲಿ ಈ ವಿಷಯದ ಬಗ್ಗೆ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಮಾವೇಶಗಳು 30ರ ಸರಣಿ ಸಮಾವೇಶಗಳಲ್ಲಿ ಮೊದಲನೆಯದು. ಬಿಜೆಪಿ ನಾಯಕರು ದೇಶಾದ್ಯಂತ ಈ ರೀತಿಯ ಸಮಾವೇಶಗಳನ್ನು ಆಯೋಜನೆಗೊಳಿಸಲಿದ್ದಾರೆ. ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್ಆರ್ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ನೊಂದಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಯಾವುದೇ ರೀತಿಯಲ್ಲೂ ಸಂಪರ್ಕವನ್ನು ಹೊಂದಿಲ್ಲ ಎಂಬುದನ್ನು ಜನರಿಗೆ ಸ್ಪಷ್ಟಪಡಿಸುವುದು ಕೂಡ ಈ ಸಮಾವೇಶಗಳ ಮುಖ್ಯ ಉದ್ದೇಶವಾಗಿದೆ.
2014 ರ ಮೊದಲು ಅಫ್ಘಾನಿಸ್ಥಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿರುವ ಮುಸ್ಲಿಮೇತರರಿಗೆ ತ್ವರಿತಗತಿಯಲ್ಲಿ ಪೌರತ್ವವನ್ನು ನೀಡಲು ಸಿಎಎ ಅನ್ನು ಕಳೆದ ತಿಂಗಳು ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.