ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಮಿಲಿಟರಿ ಕಾರ್ಯಾಚರಣೆಯ ಕಾರ್ಯಸಾಧ್ಯತೆಯ ಬಗ್ಗೆ ವಿವರಿಸಿರುವ ನೂತನ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ ಅವರು, ಆದೇಶ ಬಂದರೆ ಆ ಪ್ರದೇಶವನ್ನು ಗುರಿಯಾಗಿಸಲು ಸಶಸ್ತ್ರ ಪಡೆಗಳು ಸಿದ್ಧವಾಗಿವೆ ಎಂದಿದ್ದಾರೆ.
“ನಮ್ಮ ಪಡೆಗಳನ್ನು ಜಮ್ಮು-ಕಾಶ್ಮೀರ ಸೇರಿದಂತೆ ಗಡಿಯುದ್ದಕ್ಕೂ ನಿಯೋಜಿಸಲಾಗಿದೆ ಮತ್ತು ವಿವಿಧ ಯೋಜನೆಗಳನ್ನು ನಾವು ಹೊಂದಿದ್ದೇವೆ. ಅಗತ್ಯವಿದ್ದರೆ, ಆ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲೂಬಹುದು. ನಾವು ಮಾಡಬೇಕಾದ ಯಾವುದೇ ಕೆಲಸವನ್ನು ನಾವು ಯಶಸ್ವಿಯಾಗಿ ನಿರ್ವಹಿಸುತ್ತೇವೆ” ಎಂದು ನರವಾಣೆ ಹೇಳಿದ್ದಾರೆ.
ಪಿಒಕೆಯಲ್ಲಿ ದೊಡ್ಡ ಪ್ರಮಾಣದ ಕಾರ್ಯಾಚರಣೆಯ ಸಾಧ್ಯತೆಯನ್ನು ನರವಾಣೆ ದೃಢಪಡಿಸಿದ್ದಾರೆ.
ಕೆಲವು ತಿಂಗಳ ಹಿಂದೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
ಇತ್ತೀಚಿಗೆ ಹೇಳಿಕೆ ನೀಡಿದ್ದ ಜೈ ಶಂಕರ್ ಅವರು, ಒಂದಲ್ಲ ಒಂದು ದಿನ ಭಾರತವು ಪಿಒಕೆ ಮೇಲೆ ನಿಯಂತ್ರಣವನ್ನು ಹೊಂದಿರುತ್ತದೆ ಎಂದು ಭರವಸೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.